ಬೆಂಗಳೂರು: ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ಇವರ ಅಟ್ಟಹಾಸದಿಂದ ಅಮಾಯಕ ಜೀವಗಳು ಬಲಿಯಾಗುತ್ತಿವೆ. ಇದನ್ನು ತಡೆಗಟ್ಟುವುದಕ್ಕಾಗಿ ಸರ್ಕಾರ ವೈದ್ಯರ ನೋಂದಣಿ ಸಂಖ್ಯೆಯನ್ನು ಆಸ್ಪತ್ರೆ ಮುಂದೆ ದೊಡ್ಡದಾಗಿ ಬರೆಯಬೇಕು ಎಂದು ನಿರ್ದೇಶಿಸಿದೆ.
ಕೆಪಿಎಂಇ ಕಾಯ್ದೆ ನಿಯಮ ೫ರ ಪ್ರಕಾರ, ಸಾರ್ವಜನಿಕರ ಮಾಹಿತಿಗಾಗಿ ವೈದ್ಯಕೀಯ ಪದ್ಧತಿ ಮತ್ತು ಲಭ್ಯವಿರುವ ಸೇವೆಗಳ ವಿವರವನ್ನು ಆಸ್ಪತ್ರೆಯ ಆವರಣದ ಪ್ರಮುಖ ಸ್ಥಳಗಳಲ್ಲಿ ಸ್ಪಷ್ಟವಾಗಿ ಪ್ರದರ್ಶಿಸಬೇಕು. ಕೆಲ ಖಾಸಗಿ ಆಸ್ಪತ್ರೆ, ಕ್ಲಿನಿಕ್ಗಳು ಸಾಂಪ್ರದಾಯಿಕ ಹಾಗೂ ಪಾರಂಪರಿಕ ಪದ್ಧತಿ, ಮನೆ ಮದ್ದುಗಳು, ಬಾಡಿ ಮಸಾಜ್ ಹಾಗೂ ವಿವಿಧ ಥೆರಪಿಗಳ ಅನಧಿಕೃತ ಅಭ್ಯಾಸದಲ್ಲಿ ತೊಡಗಿಕೊಂಡಿರುವ ಬಗ್ಗೆ ದೂರುಗಳು ಸಲ್ಲಿಕೆಯಾಗಿದೆ. ಹೀಗಾಗಿ ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದ ಆಸ್ಪತ್ರೆಗಳು ಹಸಿರು ಬಣ್ಣ ಸೂಚಿತ ಫಲಕವನ್ನು ಬಳಸಬೇಕು. ಈ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ಆದೇಶಿಸಲಾಗಿದೆ
Discussion about this post