6
  • Latest

ಬಡವರ ಒತ್ತುವರಿ ತೆರವು ಇಲ್ಲ: ಅರಣ್ಯ ಅತಿಕ್ರಮಣದಾರರಿಗೆ ಸಚಿವರ ಅಭಯ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬಡವರ ಒತ್ತುವರಿ ತೆರವು ಇಲ್ಲ: ಅರಣ್ಯ ಅತಿಕ್ರಮಣದಾರರಿಗೆ ಸಚಿವರ ಅಭಯ

AchyutKumar by AchyutKumar
October 9, 2024
in ರಾಜ್ಯ
advt advt advt
ADVERTISEMENT

ದಾಂಡೇಲಿ: `2015ಕ್ಕೆ ಮೊದಲು ತಮ್ಮ ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿರುವ ಬಡ ಜನರನ್ನು ಒಕ್ಕಲೆಬ್ಬಿಸಬೇಡಿ’ ಎಂದು ಅರಣ್ಯ ಅಧಿಕಾರಿಗಳಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದರು. `ಹೊಸದಾಗಿ ಒತ್ತುವರಿ ಮಾಡುವವರಿಗೆ ಅವಕಾಶ ನೀಡುವುದಿಲ್ಲ. ದೊಡ್ಡ ಒತ್ತುವರಿ ತೆರವು ಮಾಡದೇ ಬಿಡುವುದಿಲ್ಲ’ ಎಂದವರು ಎಚ್ಚರಿಸಿದರು.
ದಾಂಡೇಲಿಯಲ್ಲಿ ನಡೆದ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು `ಅರಣ್ಯ ಹಕ್ಕು ಕಾಯಿದೆ ಅಡಿ ಅರ್ಜಿ ಹಾಕಿರುವವರ ಯಾವುದೇ ಅರ್ಜಿ ಪುನರ್ ಪರಿಶೀಲನೆಯಲ್ಲಿದ್ದರೆ ಅಂತಹವರ ಒತ್ತುವರಿ ತೆರವು ಮಾಡಿಸದಂತೆ ಸೂಚಿಸಲಾಗಿದೆ. ಜೊತೆಗೆ ರಾಜ್ಯ ಸರ್ಕಾರ ಕಳೆದ ವಿಧಾನಮಂಡಳದ ಅಧಿವೇಶನದಲ್ಲಿ ಅರಣ್ಯ ಹಕ್ಕು ಕಾಯಿದೆ ಜಾರಿಗೆ 25 ವರ್ಷಕ್ಕಿಂತ ಹಿಂದೆ ಅರಣ್ಯದಲ್ಲಿದ್ದವರಿಗೆ ಹಕ್ಕು ನೀಡಬೇಕು ಎಂದು ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಿದೆ’ ಎಂದರು. ಹಾವು ಕಚ್ಚಿ ಸಾವನ್ನಪ್ಪುವವರಿಗೆ ಹೆಚ್ಚಿನ ಪರಿಹಾರ ನೀಡುವ ಕುರಿತಂತೆ ಸಾರ್ವಜನಿಕರಿಂದ ಮತ್ತು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳ ಬೇಡಿಕೆ ಇದ್ದು, ಈ ಬಗ್ಗೆ ಪರಿಶೀಲಿಸುವುದಾಗಿ ಭರವಸೆ ನೀಡಿದರು. `ಕಾಡು ಹಂದಿ, ನವಿಲುಗಳಿಂದ ಆಗುತ್ತಿರುವ ಬೆಳೆ ಹಾನಿಯ ಪರಿಹಾರ ಹೆಚ್ಚಳ ಮಾಡಬೇಕು, ವೈಜ್ಞಾನಿಕವಾಗಿ ಪರಿಹಾರ ನೀಡಬೇಕು ಎಂಬ ಬೇಡಿಕೆ ರೈತರಿಂದ ಬಂದಿದೆ. ಈ ಕುರಿತಂತೆ ಒಂದು ಸಮಿತಿ ಮಾಡಿ ವರದಿ ಬಂದ ಬಳಿಕ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು. `7-8 ದಶಕಗಳ ಹಿಂದೆ ಕೆಲವರು ವನ್ಯ ಜೀವಿಗಳನ್ನು ಕೊಂದು ಸತ್ತ ಪ್ರಾಣಿಯ ಜೊತೆ ಫೋಟೋ ತೆಗೆಸಿಕೊಂಡು ಮನೆಯಲ್ಲಿ ತೂಗುಹಾಕುತ್ತಿದ್ದರು. ಮೋಜಿಗಾಗಿ ಬೇಟೆ ಆಡುತ್ತಿದ್ದರು. ಆದರೆ 1972ರಲ್ಲಿ ವನ್ಯಜೀವಿ ಸಂರಕ್ಷಣಾ ಕಾಯಿದೆ ಜಾರಿಗೆ ತಂದ ಬಳಿಕ ಇಂತಹ ಬೇಟೆ, ಕಳ್ಳಬೇಟೆ ನಿಗ್ರಹವಾಗಿದೆ’ ಎಂದರು.

Advertisement. Scroll to continue reading.
Advertisement. Scroll to continue reading.

`ಭೂಮಿಗೆ ಕಾಡು ಭೂಷÀಣ, ಕಾಡಿಗೆ ವನ್ಯ ಜೀವಿ, ಸಸ್ಯ ಸಂಕುಲವೇ ಭೂಷಣ. ಇಂತಹ ವನ, ವನ್ಯ ಸಂಪತ್ತನ್ನು ಉಳಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಮನುಷ್ಯನಿಗೆ ಆಸೆ ಇರಬೇಕು, ಆದರೆ ದುರಾಸೆ ಇರಬಾರದು. ಮಾನವನ ಬದುಕಿಗೆ ಆಧಾರವಾಗಿರುವ ಅರಣ್ಯ ನಾಶ, ಒತ್ತುವರಿ ಮಾಡಬಾರದು . ಇಡೀ ದೇಶದ ಹವಾಮಾನದ ಮೇಲೆ ಪರಿಣಾಮಬೀರಿ, ಮಳೆ ಉತ್ತಮವಾಗಿ ಬೀಳಲು ಪಶ್ಚಿಮಘಟ್ಟಗಳನ್ನು ಎಲ್ಲರೂ ಜತನವಾಗಿ ಕಾಪಾಡಿ ಮುಂದಿನ ಪೀಳಿಗೆಗೆ ನೀಡಬೇಕು ಎಂದರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.80ರಷ್ಟ್ಟು ಅರಣ್ಯವಿದೆ. ವನ, ವನ್ಯಜೀವಿಗಳ ಜೊತೆ ಸಹಬಾಳ್ವೆ ನಡೆಸುವುದರಲ್ಲಿ ಈ ಜಿಲ್ಲೆಯ ಜನರ ಪಾತ್ರ ಮಹತ್ವದ್ದಾಗಿದ್ದು, ಇಷ್ಟು ಬೃಹತ್ ಪ್ರಮಾಣದಲ್ಲಿ ಅರಣ್ಯ ಸಂರಕ್ಷಣೆ ಮಾಡಿರುವ ಎಲ್ಲರೂ ಅಭಿನಂದನಾರ್ಹರು. ಉತ್ತರ ಕನ್ನಡ ಜಿಲ್ಲೆಯಲ್ಲಿ ಎಲ್ಲಿ ನೋಡಿದರೂ ಹಸಿರೇ ಕಾಣುತ್ತದೆ. ಪಶ್ಚಿಮಘಟ್ಟದ ಸುಂದರ ತಾಣದಲ್ಲಿರುವ ಜಿಲ್ಲೆಯ ಜನರು ಪುಣ್ಯವಂತರು’ ಎಂದರು.

ADVERTISEMENT
ADVERTISEMENT

`ಜಿಲ್ಲಾ ಉಸ್ತುವಾರಿ ಸಚಿವ ಮಾಂಕಾಳ ವೈದ್ಯ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಹತ್ತಾರು ಎಕರೆ ಒತ್ತುವರಿ ಮಾಡಿದವರು ಯಾರೂ ಇಲ್ಲ. ಜೀವಿನೋಪಾಯಕ್ಕೆ 1 ಎಕರೆ ಅರಣ್ಯ ಜಮೀನು ಒತ್ತುವರಿ ಮಾಡಿದ ಬಡವರಿದ್ದಾರೆ. ಅವರ ಜೀವನೋಪಾಯಕ್ಕೆ ತೊಂದರೆ ನೀಡದಂತೆ ಕ್ರಮವಹಿಸಬೇಕು’ ಎಂದರು. `ಉತ್ತರ ಕನ್ನಡ ಜಿಲ್ಲೆಯಲ್ಲಿ ಅವಿದ್ಯಾವಂತರಾದ 75 ಸಾವಿರಕ್ಕೂ ಹೆಚ್ಚು ಜನರು ಅರಣ್ಯದಲ್ಲೇ ವಾಸಿಸುತ್ತಿದ್ದಾರೆ. ಅವರು ಹಲವು ದಶಕಗಳಿಂದ ಅರಣ್ಯದಲ್ಲೇ ಬದುಕಿದ್ದಾರೆ. ಉತ್ತರ ಕನ್ನಡ ಜಿಲ್ಲೆಯನ್ನು ಇತರ ಜಿಲ್ಲೆಯಂತೆ ನೋಡಬಾರದು. ನಮ್ಮ ಬಡ ಜನರಿಗೆ ನ್ಯಾಯ ದೊರಕಿಸಬೇಕು’ ಎಂದರು. ಇದೇ ಸಂದರ್ಭದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗೆ ಮತ್ತು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಶಾಲಾ-ಕಾಲೇಜು ಮಕ್ಕಳಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತ್ ರೆಡ್ಡಿ ,ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರಶಾಂತ್ ಕುಮಾರ್, ರವಿಶಂಕರ್ ಮತ್ತಿತರರು ಪಾಲ್ಗೊಂಡಿದ್ದರು.

ShareSendTweetShare
ADVERTISEMENT
Previous Post

ಹಬ್ಬಕ್ಕೆ ಹೊರಟ ಯುವತಿ ಕಣ್ಮರೆ: ಊರಿಗೆ ಬಂದವಳು ಮನೆಗೆ ಬರಲಿಲ್ಲ!

Next Post

ಎರಡು ಲಕ್ಷದ ಸೇತುವೆಗೆ ಆರೇ ತಿಂಗಳ ಭವಿಷ್ಯ!

Next Post

ಎರಡು ಲಕ್ಷದ ಸೇತುವೆಗೆ ಆರೇ ತಿಂಗಳ ಭವಿಷ್ಯ!

ದುಡ್ಡು ಕೊಡಿಸಲು ಬಂದವನಿoದಲೇ ಪಂಗನಾಮ: ಪತ್ರಕರ್ತನ ವಿರುದ್ಧ ಮತ್ತೊಂದು ದೂರು!

ಅರ್ಹತೆಗೆ ತಕ್ಕ ಉದ್ಯೋಗ: ಕನಸಿನ ಕೆಲಸ ಹುಡುಕಲು ಇಲ್ಲಿದೆ ನೂರು ಅವಕಾಶ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.