6

ಮಾನಸ ಕೇಂದ್ರ ಬಲು ದೂರ | ಅಸ್ವಸ್ಥರಿಗೆ ಆಶ್ರಯ ಕೇಂದ್ರ ಸ್ಥಾಪನೆಗಾಗಿ ಮುಖ್ಯಮಂತ್ರಿಗೆ ಪತ್ರ

ಕುಮಟಾ: 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 20 ಸಾವಿರಕ್ಕೂ ಅಧಿಕ ಮಾನಸಿಕ ಅಸ್ವಸ್ಥರಿದ್ದಾರೆ. ಮಾನಸಿಕ ಅಸ್ವಸ್ಥತೆಯನ್ನು ದೂರ ಮಾಡಿ ಅವರನ್ನು ಮುಖ್ಯ ವಾಹಿನಿಗೆ ತರುವ ಕೇಂದ್ರಗಳಿರುವುದು ಬೆಂಗಳೂರು-ಬೆಳಗಾವಿಯಲ್ಲಿ ಮಾತ್ರ. ಹೀಗಾಗಿ `ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹ ಇಂಥ ಕೇಂದ್ರ ಶುರು ಮಾಡಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದವರು ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದಿದ್ದಾರೆ.

`ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯರಿದ್ದಾರೆ. ಅವರಿಗೆ ಯೋಗ್ಯ ಚಿಕಿತ್ಸೆ ಹಾಗೂ ವಸತಿ ಸಿಗುತ್ತಿಲ್ಲ. ಮಾನಸಿಕ ಆಸ್ಪತ್ರೆಯಲ್ಲಿ ಗುಣಮುಖರಾದವರಿಗೆ ಆಪ್ತ ಸಮಾಲೋಚನೆ ಅಗತ್ಯವಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಹ ಮಾನಸ ಕೇಂದ್ರ ಸ್ಥಾಪಿಸಬೇಕು’ ಎಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗ್ಸ್ ಮನವಿ ಮಾಡಿದ್ದಾರೆ.

ಪ್ರಮುಖರಾದ ಸುಧಾಕರ ನಾಯ್ಕ, ನನ್ನೀ ಸಾಬ್ ಪರ್ವೀನ್, ಬಾನು ಲಕ್ಷ್ಮಿ ನಾಯ್ಕ, ಸ್ಟಿಪನ್ ನರೋನ ಸಹ ಇದಕ್ಕೆ ಸಮ್ಮತಿ ಸೂಚಿಸಿ ಪತ್ರಕ್ಕೆ ಸಹಿ ಹಾಕಿದರು.

  • Related Posts

    ನಾನಾ ಪಾಟೇಕರ್ ನಿಧನಕ್ಕೆ : ಬೊಮ್ಮಾಯಿ ಸಂತಾಪ

    Share this… Facebook Pinterest Twitter Linkedin Whatsapp*ನಟ ನಾನಾ ಪಾಟೇಕರ್ ನಿಧನಕ್ಕೆ ಸಂಸದ ಬಸವರಾಜ ಬೊಮ್ಮಾಯಿ ಸಂತಾಪ* ಬೆಂಗಳೂರು: ಖ್ಯಾತ ಬಾಲಿವುಡ್ ನಟ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ದುಖವಾಯಿತು. ಹಿಂದಿ ಹಾಗೂ ಮರಾಠಿ…

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    You cannot copy content of this page