ಸಿದ್ದಾಪುರ: ಹೆರಿಗೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದ ಜ್ಯೋತಿ ನಾಯ್ಕ ಎಂಬಾತರು ಸಿಜರಿಯನ್ ವೇಳೆ ಸಾವನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯ ಖಂಡಿಸಿ ನೂರಾರು ಜನ ಆಸ್ಪತ್ರೆ ಮುಂದೆ ಪ್ರತಿಭಟಿಸಿದರು. ಬಾಣಂತಿ ಸಾವಿಗೆ ವೈದ್ಯರು ಕಾರಣ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬಾಣಂತಿ ಶವವನ್ನು ಆಸ್ಪತ್ರೆ ಮುಂದಿರಿಸಿ ನ್ಯಾಯಕ್ಕಾಗಿ ಹೋರಾಟ ನಡೆಸಿದರು.
ಮೂರು ದಿನದ ಹಿಂದೆಯೂ ಸಾರ್ವಜನಿಕರು ಆಸ್ಪತ್ರೆ ಎದುರು ಪ್ರತಿಭಟಿಸಿದ್ದರು. ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಆಸ್ಪತ್ರೆಯಲ್ಲಿನ ಲಂಚಾವತಾರದ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡಿದ್ದರು. `ಸರ್ಕಾರಿ ಸೇವೆಯಲ್ಲಿರುವ ಮಕ್ಕಳ ತಜ್ಞರು, ಹೆರಿಗೆ ತಜ್ಞರು ಹಾಗೂ ನರ್ಸ ಕೆಲಸದಲ್ಲಿರುವವರು ಬಡವರಿಗೆ ಸೂಕ್ತ ಸೇವೆ ನೀಡುತ್ತಿಲ್ಲ’ ಎಂದು ಅಸಮಧಾನ ವ್ಯಕ್ತಪಡಿಸಿದ್ದರು.
ಈಗ ನಡೆದ ಪ್ರತಿಭಟನೆಯಲ್ಲಿ ಸಹ `ಸರ್ಕಾರಿ ಆಸ್ಪತ್ರೆ ವೈದ್ಯರು ಬಡ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸುತ್ತಾರೆ. ಗರ್ಭಿಣಿ ಹಾಗೂ ಬಾಣಂತಿಯರಿAದ ಕಾಸು ಪಡೆಯುತ್ತಾರೆ’ ಎಂದು ದೂರಿದರು. ಕೂಡಲೇ ವೈದ್ಯರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ನೂರಾರು ಜನ ಜಮಾಯಿಸಿ ಪ್ರತಿಭಟಿಸಿದ ವಿಡಿಯೋ ಇಲ್ಲಿ ನೋಡಿ..