ಯಾರಿಗೂ ಮೋಸ ಮಾಡದೇ, ನೋವು ನೀಡದೇ ಒಂದು ಕೋಟಿ ದುಡಿಯುವ ಬಯಕೆಯ ಡ್ರೈವರ್ ಕಥೆ ಹೇಳುವ ಸಿನಿಮಾ `ಕೋಟಿ’. ಯಲ್ಲಾಪುರದ ಪರಮೇಶ್ವರ ಗುಂಡ್ಕಲ್ ನಿರ್ದೇಶನದ `ಕೋಟಿ’ ಸಿನೀಮಾ ಕೋಟಿ ಲೆಕ್ಕದಲ್ಲಿಯೇ ನಿರೀಕ್ಷೆಗಳನ್ನು ಹುಟ್ಟುಹಾಕಿದೆ.
ಧನಂಜಯ್ ಪೂರ್ಣಪ್ರಮಾಣದ ಹೀರೋ ಆದ ಮೇಲೆ ಮಾಡಿದ ದೊಡ್ಡ ಬಜೆಟ್ಟಿನ ಸಿನಿಮಾ ಇದಾಗಿದೆ. `ಜಿಯೋ ಸ್ಟುಡಿಯೋಸ್’ನಂಥ ದೊಡ್ಡ ಸಂಸ್ಥೆಯ ಮೊದಲ ಕನ್ನಡ ಸಿನಿಮಾ ಇದಾಗಿದೆ. ಅಪ್ಪಟ ಕನ್ನಡ ಮಣ್ಣಿನ ಕತೆಯಾದ ಕೋಟಿಯ ಟೀಸರ್ ಮತ್ತು ಹಾಡುಗಳ ಮುಖಾಂತರ ಸದ್ದು ಮಾಡುತ್ತಿದೆ. ವರ್ಷದ ಮೊದಲಾರ್ಧದಲ್ಲಿ ಯಾವುದೇ ದೊಡ್ಡ ಗೆಲುವು ಕಾಣದೆ ಕಂಗೆಟ್ಟಿರುವ ಕನ್ನಡ ಇಂಡಸ್ಟ್ರಿಗೆ `ಕೋಟಿ’ ಗೆಲ್ಲುವ ಭರವಸೆಯಾಗಿ ಕಂಡಿದೆ. ಒಂದೊಳ್ಳೆ ಕತೆ, ಒಳ್ಳೆ ಮನರಂಜನೆಗೆ ಇಲ್ಲಿ ಮೋಸವಿಲ್ಲ.
Discussion about this post