ಬೆಂಗಳೂರು: ಕರ್ನಾಟಕಕ್ಕೆ ಇನ್ನೊಬ್ಬ ಉಪಮುಖ್ಯಮಂತ್ರಿ ನೀಡಬೇಕು ಎಂಬ ವಿಷಯ ಮುನ್ನೆಲೆಗೆ ಬಂದಿದೆ.
ಮುಖ್ಯಮoತ್ರಿ ಸಿದ್ದರಾಮಯ್ಯನವರ ಸಂಪುಟದ ಸಹೋದ್ಯೋಗಿಗಳು, ವಿಶೇಷವಾಗಿ ಅವರ ನಿಷ್ಠಾವಂತರು ಸರ್ಕಾರದಲ್ಲಿ ಹೆಚ್ಚಿನ ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ವಿಷಯವನ್ನು ಮತ್ತೆ ಪ್ರಸ್ತಾಪಿಸುತ್ತಿದ್ದಾರೆ. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಮಾಡಿದರೆ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಸಹಾಯ ಮಾಡುತ್ತದೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದ್ದಾರೆ. ಇದರ ಜೊತೆಗೆ ಅವರು ವಿವಿಧ ಸಮುದಾಯದ ಮೂವರು ನಾಯಕರಿಗೆ ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸುವ ಬೇಡಿಕೆಯನ್ನು ಮುಂದಿರಿಸಿದ್ದಾರೆ.
Discussion about this post