ಬಿಗ್ ಬಾಸ್ ಕನ್ನಡ 10 ಸ್ಪರ್ಧಿ ಸಿರಿ ಸದ್ದಿಲ್ಲದೇ ಸಪ್ತಪದಿ ತುಳಿದಿದ್ದಾರೆ.
ಜೂನ್ 13ರಂದು ಉದ್ಯಮಿ ಪ್ರಭಾಕರ್ ಭೋರೆಗೌಡ ಜೊತೆ ಸಿರಿ ಹಸೆಮಣೆ ಏರಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗ್ರಾಮದಲ್ಲಿನ ಭೋಗ ನಂದೀಶ್ವರ ದೇವಾಲಯದಲ್ಲಿ ಸಿರಿ ಮತ್ತು ಪ್ರಭಾಕರ್ ಮದುವೆ ನಡೆಯಿತು. ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದು, ಈ ಇಬ್ಬರು ಇದೀಗ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಪ್ರಭಾಕರ್ ಅವರು ಮೂಲತಃ ಮಂಡ್ಯದವರಾಗಿದ್ದಾರೆ.
ಸದ್ದಿಲ್ಲದೇ ಸಪ್ತಪದಿ ತುಳಿದ ಸಿರಿ

Leave a comment