ಯಲ್ಲಾಪುರ: `ತಾಲೂಕು ಪಂಚಾಯತ ಕಚೇರಿಗಳಲ್ಲಿ ಅನೇಕ ವರ್ಷಗಳಿಂದ ಬೀಡು ಬಿಟ್ಟಿರುವ ಅಧಿಕಾರಿ-ಸಿಬ್ಬಂದಿಯನ್ನು ಬೇರೆ ಕಡೆ ವರ್ಗಾಯಿಸಬೇಕು’ ಎಂದು ಸಾಮಾಜಿಕ ಕಾರ್ಯಕರ್ತ ಧೀರಜ ತಿನ್ನೇಕರ್ ಆಗ್ರಹಿಸಿದ್ದಾರೆ.
ಈ ಕುರಿತು ತಾ ಪಂ ಕಾರ್ಯನಿರ್ವಾಹಕ ಅಧಿಕಾರಿಗಳ ಮೂಲಕ ಅವರು ಮುಖ್ಯಮಂತ್ರಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಮನವಿ ರವಾನಿಸಿದ್ದಾರೆ.
`ಯಲ್ಲಾಪುರ ತಾಲೂಕು ಪಂಚಾಯತ ಕಚೇರಿಯಲ್ಲಿ ಕೆಲ ಸಿಬ್ಬಂದಿ ಅನೇಕ ವರ್ಷಗಳಿಂದ ವರ್ಗವಾಗಿಲ್ಲ. 3 ವರ್ಷದ ನಂತರ ವರ್ಗಾವಣೆಗೆ ಅವಕಾಶವಿದ್ದರೂ ರಾಜಕೀಯ ಪ್ರಭಾವ ಬಳಸಿ ಇಲ್ಲಿಯೇ ಕೆಲಸ ಮಾಡುತ್ತಿದ್ದಾರೆ. ಒಟ್ಟು ಆರು ಸಿಬ್ಬಂದಿ ಈ ಅನೇಕ ವರ್ಷಗಳಿಂದ ಇಲ್ಲಿದ್ದು, ಅವರನ್ನು ಕೂಡಲೇ ಬೇರೆ ಕಡೆ ವರ್ಗಾಯಿಸಬೇಕು’ ಎಂದವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
`ಅನೇಕ ವರ್ಷಗಳಿಂದ ತಾಪಂ ಕಚೇರಿಯಲ್ಲಿ ಕೆಲಸ ಮಾಡುತ್ತಿರುವವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಗುತ್ತಿಗೆದಾರರಿಂದ ಶೇ 20ರಷ್ಟು ಲಂಚ ಸ್ವೀಕರಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿಗೆ ರವಾನಿಸಿದ ಪತ್ರದಲ್ಲಿ ಆರೋಪಿಸಿದ್ದಾರೆ.