ಬೆಂಗಳೂರು: ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದAತೆ ಕರ್ನಾಟಕ ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ.
ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗುತ್ತಿದ್ದಂತೆಯೇ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. `ಯಡಿಯೂರಪ್ಪ ಅವರಿಗೆ ವಯಸ್ಸಾಗಿದ್ದು, ಸಹಜವಾಗಿ ಅನಾರೋಗ್ಯದ ಸಮಸ್ಯೆಗಳಿವೆ. ಅವರು ತನಿಖಾ ತಂಡದ ಎದುರು ಜೂ 17ರಂದು ಹಾಜರಾಗುವುದಾಗಿ ತಿಳಿಸಿದ್ದಾರೆ. ಆದ್ದರಿಂದ ಅವರನ್ನು ಬಂಧಿಸುವ ಅಗತ್ಯವಿಲ್ಲ’ ಎಂದು ಹೈಕೋರ್ಟ್ ಹೇಳಿದೆ.
Discussion about this post