ಕಾರವಾರ: ಕಾಂಗ್ರೆಸ್ ಸರ್ಕಾರದ ವಿರುದ್ಧ ಗುರುವಾರ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ರಾಮಕೃಷ್ಣ ಆಶ್ರಮದ ಭಾವೇಶಾನಂದ ಸ್ವಾಮೀಜಿ ಭಾಗವಹಿಸಿದ್ದು, ಪ್ರತಿಭಟನಾಕಾರರ ಜೊತೆ ಕುಳಿತು ಅವರು ದಿನ ಕಳೆದರು.
ಜಿಲ್ಲಾಧಿಕಾರಿ ಕಚೇರಿ ಮುಂದೆ ಬಿಜೆಪಿಗರು ನೂರಾರು ಸಂಖ್ಯೆಯಲ್ಲಿ ಆಗಮಿಸಿ ಪ್ರತಿಭಟನೆ ನಡೆಸಿದರು. ಮುಖ್ಯವಾಗಿ ವಕ್ಟ್ ಭೂ ಹಗರಣ ವಿರುದ್ಧ ಪ್ರಮುಖರು ಮಾತನಾಡಿದರು. ಮೈಕು ಹಿಡಿದ ಪ್ರತಿಯೊಬ್ಬರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದರು.
`ಮುಖ್ಯಮಂತ್ರಿ ಸಿದ್ಧರಾಮಯ್ಯ ಅಧಿಕಾರಕ್ಕೆ ಬಂದ ನಂತರ ಹಗರಣಗಳ ಮೇಲೆ ಹಗರಣ ನಡೆಯುತ್ತಿದೆ. ಇದೀಗ ವಕ್ಟ್ ಹೆಸರಿನಲ್ಲಿ ಇದೀಗ ಬಡ ರೈತರ ಭೂಮಿಯನ್ನು ಸರ್ಕಾರ ಕಬಳಿಸುತ್ತಿದೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
`ನಮ್ಮ ಭೂಮಿ ನಮ್ಮ ಹಕ್ಕು’ ಎಂಬ ಘೋಷಣಾ ಫಲಕಗಳನ್ನು ಪ್ರತಿಭಟನಾಕಾರರು ಪ್ರದರ್ಶಿಸಿದರು. `ಸಾರ್ವಜನಿಕ ಆಸ್ಪಿಯನ್ನು ಕಾಂಗ್ರೆಸ್ ನುಂಗುತ್ತಿದೆ. ಅಲ್ಪಸಂಖ್ಯಾತರ ಒಲೈಕೆಗಾಗಿ ಹಿಂದುತ್ವದ ವಿರುದ್ಧ ಹುನ್ನಾರ ನಡೆಸುತ್ತಿದೆ’ ಎಂದು ಕಿಡಿಕಾರಿದರು.
`ಕಾಂಗ್ರೆಸ್ಸಿಗರಿಗೆ ಧಿಕ್ಕಾರ. ಭೃಷ್ಟ ಕಾಂಗ್ರೆಸ್ ಸರ್ಕಾರ ತೊಲಗಲಿ’ ಎಂಬ ಘೋಷಣೆಗಳನ್ನು ಕೂಗಿದರು. ಬೆಳಗ್ಗೆ 10ಗಂಟೆಯಿoದ ಸಂಜೆ 5 ಗಂಟೆಯವರೆಗೂ ಧರಣಿ ನಡೆದಿದ್ದು, ನಂತರ ವಕ್ಟ ಹಗರಣದ ತನಿಖೆಗೆ ಆಗ್ರಹಿಸಿ ಬರೆಯಲಾದ ಮನವಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು. ಜಿಲ್ಲೆಯ ನಾನಾ ಭಾಗದ ಬಿಜೆಪಿ ಕಾರ್ಯಕರ್ತರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.