6 Skip to content

ಸಚಿವನ ಪುತ್ರನಿಗೆ ನಡುಕ: ಬಂಧನ ಭೀತಿ

ಬೆಂಗಳೂರು: ಕೇಂದ್ರ ಸಚಿವ ವಿ ಸೋಮಣ್ಣ ಅವರ ಪುತ್ರ ಪುತ್ರ ಅರುಣ್ ಸೋಮಣ್ಣ ಬಂಧನದ ಸಾಧ್ಯತೆ ಹೆಚ್ಚಾಗಿದೆ. ಅವರ ವಿರುದ್ಧ ವಂಚನೆ ಹಾಗೂ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ.
ಕೇಂದ್ರ ರೈಲ್ವೇ ಖಾತೆ ಮತ್ತು ಜಲಶಕ್ತಿ ಇಲಾಖೆಯ ರಾಜ್ಯ ಸಚಿವ ವಿ ಸೋಮಣ್ಣ ಅವರ ಪುತ್ರ ಡಾ ಅರುಣ್ ಸೋಮಣ್ಣ ವಿರುದ್ಧ ವಂಚನೆ, ಜೀವ ಬೆದರಿಕೆ ಹಾಕಿದ ಆರೋಪದಡಿ ಬೆಂಗಳೂರಿನ ಸಂಜಯನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.
ಈವೆoಟ್ ಮ್ಯಾನೇಜ್ ಮೆಂಟ್ ಕಂಪನಿ ವ್ಯವಹಾರದಲ್ಲಿ ಸಂಜಯನಗರದ ನಿವಾಸಿಗಳಾಗಿರುವ ದಂಪತಿಗೆ ಅರುಣ್ ವಂಚಿಸಿದ ಆರೋಪ ಇದಾಗಿದೆ. ಸಂಜಯನಗರದ ಎಇಸಿಎಸ್ ಲೇಔಟ್ ನಿವಾಸಿ ತೃಪ್ತಿ ಹೆಗಡೆ ಮತ್ತು ಮಧ್ವರಾಜ್ ದಂಪತಿ ಈ ದೂರು ಸಲ್ಲಿಸಿದ್ದಾರೆ. ತೃಪ್ತಿ ಹೆಗಡೆ ದಂಪತಿ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

Leave a comment

Leave a Reply

You cannot copy content of this page