ನವದೆಹಲಿ: `ಒಂದು ದೇಶ, ಒಂದು ಚುನಾವಣೆ’ ಕುರಿತು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಉನ್ನತ ಮಟ್ಟದ ಸಮಿತಿಯ ವರದಿಯನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಮಂಡಿಸಲು ಕೇಂದ್ರ ಕಾನೂನು ಸಚಿವಾಲಯ ಯೋಜಿಸಿದೆ.
ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಸರ್ಕಾರಕ್ಕೆ 100 ದಿನಗಳ ಕಾರ್ಯಸೂಚಿಯನ್ನು ರೂಪಿಸುವಂತೆ ಎಲ್ಲಾ ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೂಚಿಸಿದ್ದರು. ಅದರಂತೆ ಶೀಘ್ರದಲ್ಲೇ ವರದಿಯನ್ನು ಸಂಪುಟದ ಮುಂದೆ ಇಡುವುದು ಕಾನೂನು ಸಚಿವಾಲಯದ ಶಾಸಕಾಂಗ ಇಲಾಖೆಯ 100 ದಿನಗಳ ಕಾರ್ಯಸೂಚಿಯ ಭಾಗವಾಗಿದೆ. ರಾಮ್‌ನಾಥ್ ಕೋವಿಂದ್ ನೇತೃತ್ವದ ಸಮಿತಿಯು ಮಾರ್ಚ್ 15ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತನ್ನ ವರದಿಯನ್ನು ಸಲ್ಲಿಸಿತ್ತು. ಮೊದಲ ಹಂತವಾಗಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಿಗೆ ಏಕಕಾಲದಲ್ಲಿ ಚುನಾವಣೆಗಳು ನಡೆದ 100 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಸಮಿತಿ ಶಿಫಾರಸು ಮಾಡಿತ್ತು.
`ಏಕಕಾಲಿಕ ಚುನಾವಣೆಗಳು ಸಂಪನ್ಮೂಲಗಳನ್ನು ಉಳಿಸಲು ಸಹಾಯ ಮಾಡುತ್ತದೆ. ಅಭಿವೃದ್ಧಿ ಮತ್ತು ಸಾಮಾಜಿಕ ಒಗ್ಗಟ್ಟನ್ನು ಉತ್ತೇಜಿಸುತ್ತದೆ. `ಪ್ರಜಾಪ್ರಭುತ್ವದ ಅಡಿಪಾಯ’ ವನ್ನು ಆಳಗೊಳಿಸುತ್ತದೆ ಎಂದು ಸಮಿತಿ ಅಭಿಪ್ರಾಯಪಟ್ಟಿದೆ.
Discussion about this post