ಶಿರಸಿ: ಕುಮಟಾ – ಶಿರಸಿ ರಸ್ತೆ ಅಭಿವೃದ್ಧಿಗಾಗಿ ಈ ಮಾರ್ಗದ ವಾಹನ ಸಂಚಾರ ಸ್ಥಗಿತಗೊಳಿಸಿ ಉತ್ತರ ಕನ್ನಡ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಡಿಸೆಂಬರ್ 2ರಿಂದ ಈ ರಸ್ತೆ ಮಾರ್ಗವಾಗಿ ವಾಹನ ಓಡಾಟ ನಿಷೇಧಿಸಲಾಗಿದೆ.
ಈ ಮಾರ್ಗ ಸಂಚಾರ ಬಂದ್ ಮಾಡಿರುವುದರಿಂದ ಆಗಬಹುದಾದ ಅನಾನುಕೂಲಗಳನ್ನು ತಡೆಗಟ್ಟುವುದಕ್ಕಾಗಿ ಪರ್ಯಾಯವಾಗಿ ಮೂರು ಮಾರ್ಗಗಳನ್ನು ಅನುಸರಿಸುವಂತೆ ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಸೂಚಿಸಿದ್ದಾರೆ.
ಕುಮಟಾ – ಶಿರಸಿ ಮೂಲಕ ಸಿದ್ದಾಪುರ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಲಘು ವಾಹನ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಇದರೊಂದಿಗೆ ಅಂಕೋಲಾ – ಶಿರಸಿ ಮೂಲಕ ಯಲ್ಲಾಪುರ ಮಾರ್ಗದ ರಾಷ್ಟ್ರೀಯ ಹೆದ್ದಾರಿ 63ರ ಮೂಲಕವೂ ಪರ್ಯಾಯ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ.
ಜೊತೆಗೆ ಮಂಗಳೂರು-ಹೊನ್ನಾವರ-ಶಿರಸಿ ಮೂಲಕ ಸಿದ್ದಾಪುರ-ಮಾವಿನಗುಂಡಿ ಮಾರ್ಗವಾಗಿ ವಿವಿಧ ವಾಹನಗಳು ಸಂಚಾರಕ್ಕೆ ಅವಕಾಶವಿದೆ. ಶಿರಸಿ-ಕುಮಟಾ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಶೀಘ್ರದಲ್ಲಿ ಮುಗಿಸುವ ಅಗತ್ಯವಿರುವುದರಿಂದ ಸಾರ್ವಜನಿಕರು ಬದಲಿ ಮಾರ್ಗದಲ್ಲಿ ಸಂಚರಿಸುವoತೆ ಸೂಚಿಸಲಾಗಿದೆ.