ಬೆಂಗಳೂರು: ಸಂಸದರಾಗಿ ಆಯ್ಕೆಯಾಗಿ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಕಾರಣಕ್ಕೆ ಎಚ್ ಡಿ ಕುಮಾರಸ್ವಾಮಿ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಚನ್ನಪಟ್ಟಣ ಕ್ಷೇತ್ರದಿಂದ 2023ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಎಚ್.ಡಿ. ಕುಮಾರಸ್ವಾಮಿ ಶನಿವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
2024ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿರುವ ಅವರು ಸಂಸದ ಸ್ಥಾನ ಉಳಿಸಿಕೊಳ್ಳಲು ನಿರ್ಧರಿಸಿದ್ದು, ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
Discussion about this post