ಛತ್ತೀಸಗಢದ ನಾರಾಯಣಪುರದಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲರು ಸಾವನಪ್ಪಿದ್ದಾರೆ. ಒಬ್ಬ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಮತ್ತಿಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗೊಂಡಿದ್ದಾರೆ.
ನಾರಾಯಣಪುರ, ಕಂಕೇರ್, ದಾಂತೇವಾಡ ಮತ್ತು ಕೊಂಡಗಾಂವ್ ಎಂಬ ನಾಲ್ಕು ಜಿಲ್ಲೆಗಳ ಭದ್ರತಾ ಸಿಬ್ಬಂದಿ ನಡೆಸಿದ ಜಂಟಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಅಬುಜ್ಮದ್ ಅರಣ್ಯದಲ್ಲಿ ಇಂದು ಬೆಳಗ್ಗೆ ಗುಂಡಿನ ಚಕಮಕಿ ನಡೆದಿದೆ. ದಾಳಿ ಮುಂದುವರೆದಿದ್ದು, ಇನ್ನಷ್ಟು ಮಾಹಿತಿ ಬರಬೇಕಿದೆ.

Leave a comment