ಕಾರವಾರ: ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಕಾರವಾರಕ್ಕೆ ಆಗಮಿಸಿದ್ದಾರೆ. ಭಾರತೀಯ ನೌಕಾನೆಲೆಯನ್ನು ಅವರು ಪ್ರವೇಶಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲಾಡಳಿತದಿಂದ ರಾಜ್ಯಪಾಲರನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು. ನೌಕಾಪಡೆಯಿಂದ ಗೌರವ ವಂದನೆ ಸಲ್ಲಿಸಲಾಯಿತು.
ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಮಂಗಳವಾರ ಇಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬುಧವಾರ ಭಾರತೀಯ ನೌಕಾನೆಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಲಿದ್ದಾರೆ.
ಕರ್ನಾಟಕ ನೌಕಾ ಪ್ರದೇಶದ ರಿಯರ್ ಅಡ್ಮಿರಲ್ ಕೆ ಎಂ ರಾಮಕೃಷ್ಣನ್, ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ, ಜಿಲ್ಲಾ ಪಂಚಾಯತ್ ಸಿಇಒ ಈಶ್ವರ ಕಾಂದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ್ ಎಂ ಹಾಜರಿದ್ದರು.
ನೌಕಾನೆಲೆಯಲ್ಲಿ ರಾಜ್ಯಪಾಲರನ್ನು ಸ್ವಾಗತಿಸಿದ್ದು ಹೇಗೆ? ವಿಡಿಯೋ ಇಲ್ಲಿ ನೋಡಿ..