ಯಲ್ಲಾಪುರ: `ಹಿಂದುಳಿದ ವರ್ಗದವರ ಮೇಲೆ ಅನಗತ್ಯ ಪ್ರಕರಣ ದಾಖಲಿಸುವ ಮೂಲಕ ನಿರಂತರ ದೌರ್ಜನ್ಯ ನಡೆಯುತ್ತಿದ್ದು, ಇದು ಹೀಗೆ ಮುಂದುವರೆದರೆ ಪ್ರತಿಭಟನೆ ಅನಿವಾರ್ಯ’ ಎಂದು ಜಿಲ್ಲಾ ಉಪಾಧ್ಯಕ್ಷ ಎಲ್ ಟಿ ಪಾಟೀಲ ಎಚ್ಚರಿಸಿದರು.
ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು `ಯಲ್ಲಾಪುರ ತಾಲೂಕಿನಲ್ಲಿ ಹಿಂದುಳಿದ ವರ್ಗದವರ ಮೇಲೆ ರಾಜಕೀಯ ಒತ್ತಡದಿಂದ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಅಧಿಕಾರದಲ್ಲಿದ್ದವರು ದಬ್ಬಾಳಿಕೆ ನಡೆಸುತ್ತಿದ್ದಾರೆ. ಹೀಗೆ ಮುಂದುವರೆದರೆ ಅಧಿಕಾರದಲ್ಲಿರುವರ ಕಚೇರಿ ಮುಂದೆ ತಾನು ಪ್ರತಿಭಟಿಸುವೆ. ಬಿಜೆಪಿ ಸಹ ಇದಕ್ಕೆ ಬೆಂಬಲ ನೀಡಲಿದೆ. ಹಿಂದುಳಿದ ವರ್ಗದವರು ಸಹ ಬೀದಿಗಿಳಿದು ಹೋರಾಟ ನಡೆಸಲಿದ್ದಾರೆ’ ಎಂದು ಎಚ್ಚರಿಸಿದರು.
ಈ ವೇಳೆ `ಬಾಂಗ್ಲಾದಲ್ಲಿ ಆಕ್ರಮಣಕ್ಕೊಳಗಾದ ಹಿಂದುಗಳ ಬೆಂಬಲಕ್ಕೆ ನಿಲ್ಲಲು ಭಾರತೀಯ ಸರ್ಕಾರ ಹಾಗೂ ಬಿಜೆಪಿ ಕಾರ್ಯಪ್ರವೃತ್ತವಾಗಿದೆ’ ಎಂದು ರಾಜ್ಯ ಬಿಜೆಪಿ ವಕ್ತಾರ ಹರಿಪ್ರಕಾಶ ಕೋಣೆಮನೆ ಹೇಳಿದರು. `ಬಾಂಗ್ಲಾದಲ್ಲಿ ಹಿಂದು ಸಮಾಜ, ದೇವಸ್ಥಾನಗಳ ಮೇಲೆ ನಡೆಯುತ್ತಿರುವ ದಾಳಿಯ ಬಗ್ಗೆ ಬಿಜೆಪಿ ಮತ್ತು ಹಿಂದುಪರ ಸಂಘಟನೆಗಳ ಹೊರತಾಗಿ ಯಾರೊಬ್ಬರೂ ಧ್ವನಿ ಎತ್ತುತ್ತಿಲ್ಲ. ಬಿಜೆಪಿ ಹಿಂದು ಸಮಾಜದಲ್ಲಿ ಆತ್ಮವಿಶ್ವಾಸ ತುಂಬುವ ಪ್ರಯತ್ನ ನಡೆಸಿದೆ’ ಎಂದರು.
ಬಿಜೆಪಿ ಮಂಡಲಾಧ್ಯಕ್ಷ ಪ್ರಸಾದ ಹೆಗಡೆ, ಕಾರ್ಯದರ್ಶಿ ರವಿ ಕೈಟ್ಕರ್, ಮುಂಡಗೋಡ ಮಂಡಲಾಧ್ಯಕ್ಷ ಮಂಜುನಾಥ ಪಾಟೀಲ, ಪ್ರಮುಖರಾದ ಉಮೇಶ ಭಾಗ್ವತ, ಗೋಪಾಲಕೃಷ್ಣ ಗಾಂವ್ಕರ, ಕೆ ಟಿ ಹೆಗಡೆ ಇದ್ದರು.



