ಶಿರಸಿ: 15 ಸಾವಿರ ರೂ ಮಾಸಿಕ ವೇತನಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರ ಸೇರಿ ಪ್ರತಿಯೊಬ್ಬರ ಆಶಾ ಕಾರ್ಯಕರ್ತೆಯರಿಗೂ ಕನಿಷ್ಟ 15 ಸಾವಿರ ವೇತನ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಶಿರಸಿ ಉಪವಿಭಾಗಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಪ್ರಭಟನಾಕಾರರು ತಮ್ಮ ಬೇಡಿಕೆಗಳಿಗಾಗಿ ಪಟ್ಟುಹಿಡಿದರು. `ಆಶಾ ಕಾರ್ಯಕರ್ತರಿಗೆ ಹೆಚ್ಚುವರಿ ಕೆಲಸವಹಿಸಲಾಗುತ್ತಿದ್ದು, ಆ ಕೆಲಸಗಳಿಗೆ ಹೆಚ್ಚುವರಿ ವೇತನ ನೀಡಬೇಕು. ಇಲಾಖೆಯಿಂದ ನೀಡಲಾದ ಮೊಬೈಲ್ ಹಾಳಾಗಿದ್ದು, ಅದನ್ನು ಸರಿಪಡಿಸಿಕೊಡಬೇಕು. ಒತ್ತಾಯಪೂರ್ವಕವಾಗಿ ಮೊಬೈಲ್ ಮೂಲಕ ಮಾಡಿಸಿಕೊಳ್ಳುವ ಕೆಲಸ ಕೈ ಬಿಡಬೇಕು’ ಎಂದು ಆಗ್ರಹಿಸಿದರು.
`ನಿವೃತ್ತರಾಗುವ ಆಶಾ ಕಾರ್ಯಕರ್ತರಿಗೆ ಸೂಕ್ತ ಭದ್ರತಾ ವೇತನ ನೀಡಬೇಕು. ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು’ ಎಂದು ಒತ್ತಾಯಿಸಿದರು. ಬಸ್ ನಿಲ್ದಾಣದಿಂದ ಉಪವಿಭಾಗಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಸರ್ಕಾರಕ್ಕೆ ಮನವಿ ಸಲ್ಲಿಸಿದರು.