ಹೊನ್ನಾವರ: ವಿದ್ಯಾರ್ಥಿಗಳನ್ನು ಶೈಕ್ಷಣಿಕ ಪ್ರವಾಸಕ್ಕೆ ಕರೆತಂದಿದ್ದ ಬಸ್ಸು ಆರೋಳ್ಳಿ ತಿರುವಿನ ಬಳಿ ಪಲ್ಟಿಯಾಗಿದೆ. ಪರಿಣಾಮ ಬಸ್ಸಿನಲ್ಲಿದ್ದ ಮಕ್ಕಳು ಗಾಯಗೊಂಡಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರಿನ ಮಾಸ್ತಿಹಳ್ಳಿಯ ಕರ್ನಾಟಕ ಪ್ರೌಢ ಶಾಲೆಯ ವಿಧ್ಯಾರ್ಥಿಗಳು ಉತ್ತರ ಕನ್ನಡ ಜಿಲ್ಲೆಯ ಪ್ರವಾಸಕ್ಕೆ ಬಂದಿದ್ದರು. ಬಸ್ಸಿನಲ್ಲಿ ಒಟ್ಟು 40 ವಿದ್ಯಾರ್ಥಿಗಳಿದ್ದರು. ಬಸ್ಸು ಪಲ್ಟಿಯಾಗಿದ್ದರಿಂದ 34 ವಿದ್ಯಾರ್ಥಿಗಳು ಗಾಯಗೊಂಡರು.
ಈ 34 ವಿದ್ಯಾರ್ಥಿಗಳಿಗೆ ಹೊನ್ನಾವರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ನಾಲ್ವರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಬಸ್ಸು ಜಖಂ ಆಗಿದೆ.