ಶಿರಸಿ: ಕೇಂದ್ರ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಬಗ್ಗೆ ಅವಮಾನವಾಗುವ ರೀತಿ ಮಾತನಾಡಿರುವುದನ್ನು ಖಂಡಿಸಿ `ಭೀಮ ಘರ್ಜನೆ’ ಸಂಘಟನೆಯವರು ಅಮಿತ್ ಶಾ ಅವರ ಪೃತಿಕೃತಿಗೆ ಚಪ್ಪಲಿ ಏಟು ನೀಡಿ ಪ್ರತಿಭಟಿಸಿದರು. ಅದಾದ ನಂತರ ಚಪ್ಪಲಿಯ ಹಾರ ಹಾಕಿ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿದರು.
ಶಿರಸಿಯ ಅಂಬೇಡ್ಕರ್ ಸರ್ಕಲ್ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಅಮಿತ್ ಶಾ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು. `ದಲಿತರ ಪಾಲಿನ ದೇವರಾಗಿರುವ ಅಂಬೇಡ್ಕರ್ ಅವರ ಬಗ್ಗೆ ಯಾರೂ ಹಗುರವಾಗಿ ಮಾತನಾಡಿದರೂ ಸಹಿಸುವುದಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಅಮಿತ್ ಶಾ ಅವರನ್ನು ಕೇಂದ್ರ ಸರ್ಕಾರ ಸಚಿವ ಸಂಪುಟದಿ0ದ ವಜಾ ಮಾಡಬೇಕು ಎಂದು ಆಗ್ರಹಿಸಿದರು. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು. ಸಂಘಟನೆ ಪ್ರಮುಖರಾದ ಅರ್ಜುನ ಮಿಂಟಿ, ರಾಜೇಶ ದೇಶಭಾಗ, ತಿಲಕ್ ಹುಬ್ಬಳ್ಳಿ ಇತರರಿದ್ದರು.