ಶಿವಮೊಗ್ಗ: ಬೆಳಗ್ಗೆ ಲವಲವಿಕೆಯಿಂದಲೇ ಇದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಎಂ ಬಿ ಭಾನುಪ್ರಕಾಶ್ ಮಧ್ಯಾಹ್ನದ ವೇಳೆ ದೀಢೀರ್ ಹೃದಯಘಾತದಿಂದ ಸಾವನಪ್ಪಿದ್ದಾರೆ.
ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅವರು ಅಲ್ಲಿಯೇ ತೀವ್ರ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಇದೀಗ ಅವರ ಮೃತದೇಹವನ್ನು ಸ್ವಗ್ರಾಮ ಮತ್ತೂರಿಗೆ ರವಾನೆ ಮಾಡಲಾಗಿದೆ
ವಿಜಯೇಂದ್ರ ಸಂತಾಪ:
ಭಾನುಪ್ರಕಾಶ್ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, `ವಿಧಾನ ಪರಿಷತ್ ಮಾಜಿ ಸದಸ್ಯರೂ ಸಂಘಟನೆಯ ಹಿರಿಯ ಮಾರ್ಗದರ್ಶಕರೂ ಆಗಿದ್ದ ಮಾನ್ಯ ಭಾನುಪ್ರಕಾಶ್ ಅವರ ಅನಿರೀಕ್ಷಿತ ಸಾವು ಸಂಘ ಪರಿವಾರ ಹಾಗೂ ಪಕ್ಷದ ಕಾರ್ಯಕರ್ತರ ವಲಯಕ್ಕೆ ಅತೀವ ಆಘಾತವನ್ನುಂಟು ಮಾಡಿದೆ. ಸಂಘಟನೆಯ ಕುರಿತು ಕಾಲ ಕಾಲಕ್ಕೆ ನನಗೆ ಸೂಕ್ತ ತಿಳುವಳಿಕೆ ನೀಡುತ್ತಿದ್ದ ಅವರ ಅಗಲಿಕೆ ವೈಯಕ್ತಿಕವಾಗಿ ನನಗೆ ಅಪಾರ ನೋವನ್ನುಂಟು ಮಾಡಿದೆ’ ಎಂದಿದ್ದಾರೆ.
Discussion about this post