6
  • Latest

ರೈತರ ಬಗ್ಗೆ ಕಾಳಜಿ ತೋರಿದ ಶಾಸಕ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರೈತರ ಬಗ್ಗೆ ಕಾಳಜಿ ತೋರಿದ ಶಾಸಕ

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಕಿವಿಮಾತು | ರಾಸಾಯನಿಕ ತ್ಯಜಿಸಲು ಕೃಷಿಕರಿಗೆ ಕರೆ

AchyutKumar by AchyutKumar
in ಸ್ಥಳೀಯ

ಮುಂಡಗೋಡ: `ಉತ್ತಮ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಕೃಷಿ ಚಟುವಟಿಕೆಗಳು ಗರಿಗೆದರಿದ್ದು, ಕೃಷಿ ಇಲಾಖೆಯಿಂದ ಪೂರೈಸುವ ಬೀಜ, ಗೊಬ್ಬರದ ಕೊರತೆ ಆಗದಂತೆ ಕ್ರಮಹಿಸಬೇಕು. ರೈತರಿಗೆ ಸರಕಾರದಿಂದ ಸಿಗುತ್ತಿರುವ ಬೆಳೆ ವಿಮೆ ಹಣದಲ್ಲಿ ಇಡೀ ಜಿಲ್ಲೆಗೆ ಸಿಕ್ಕಂತ ಅರ್ಧದಷ್ಟು ವಿಮೆ ಹಣ ತಾಲ್ಲೂಕಿಗೆ ದೊರೆತಿದ್ದು, ಈ ಹಣ ಸಮರ್ಪಕವಾಗಿ ರೈತರ ಖಾತೆಗೆ ತಲುಪುವಂತೆ ಎಚ್ಚರವಹಿಸಬೇಕು’ ಎಂದು ಶಾಸಕ ಶಿವರಾಮ ಹೆಬ್ಬಾರಅವರು ಅಧಿಕಾರಿಗಳಿಗೆ ಸೂಚಿಸಿದರು.
ಟೌನ್ ಹಾಲ್‌ನಲ್ಲಿ ಮಂಗಳವಾರ ಜರುಗಿದ ತಾಲೂಕು ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.
ಅತೀ ತುರ್ತು ಆದಾಯಗಳಿಕೆಗಾಗಿ ರೈತರು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರಾಸಾಯನಿಕಯುಕ್ತ ಬೀಜ, ಗೊಬ್ಬರ ಬಿತ್ತನೆಗೆ ಮುಂದಾಗುತ್ತಿದ್ದು, ಭವಿಷ್ಯದಲ್ಲಿ ಭೂಮಿಯ ಸಂಪೂರ್ಣ ಫಲವತ್ತತೆ ಕ್ಷೀಣಿಸಿ ರಾಸಾಯನಿಕಯುಕ್ತ ಆಹಾರ ಪದಾರ್ಥಗಳ ಸೇವನೆಯಿಂದ ಮನುಷ್ಯನ ಆರೋಗ್ಯದ ಜೊತೆಗೆ ಮುಂಬರುವ ದಿನಗಳಲ್ಲಿ ಭೂಮಿಯ ಫಲವತ್ತತೆಯು ಹಾಳಾಗಲಿದೆ. ಹೀಗಾಗಿ ಭವಿಷ್ಯದ ಹಿತದೃಷ್ಟಿಯಿಂದ ತಾಲ್ಲೂಕಿನ ಪ್ರತಿಯೊಬ್ಬ ರೈತರು ಸಾವಯುವ ಕೃಷಿಗೆ ಹೆಚ್ಚಿನ ಆಧ್ಯತೆ ನೀಡಬೇಕಿದೆ’ ಎಂದರು.
ಜನ ಸಾಮಾನ್ಯರಿಗೆ ಅನುಕೂಲವಾಗುವಂತೆ ಸರಕಾರವು ಕೋಟ್ಯಾಂತರ ರೂಪಾಯಿ ಅನುದಾನದಲ್ಲಿ ಆರೋಗ್ಯ, ಕೃಷಿ, ಪಶು ಸಂಗೋಪನೆ, ತೋಟಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಶಿಕ್ಷಣ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಸೇರಿದಂತೆ ಅನೇಕ ಇಲಾಖೆಯಡಿ ಸಾಕಷ್ಟು ಜನೋಪಕಾರಿ ಯೋಜನೆ, ವಿವಿಧ ಸೌಲಭ್ಯ ಒದಗಿಸುತ್ತಿದ್ದು, ತಾಲ್ಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುವ ಮೂಲಕ ಪ್ರತಿಯೊಬ್ಬ ಜನಸಾಮಾನ್ಯನಿಗೂ ಸರಕಾರಿ ಸೌಲಭ್ಯಗಳು ದೊರಕುವಂತೆ ಜಾಗೃತಿ ವಹಿಸಿ ಕಾರ್ಯನಿರ್ವಹಿಸಬೇಕು ತಿಳಿಸಿದರು.
ತಾಲ್ಲೂಕಿನಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ರೈತರ ಸಂಖ್ಯೆ ಹೆಚ್ಚಾಗಿರುವುದು ಉತ್ತಮ ಬೆಳವಣಿಗೆಯಾಗಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ತೋಟಗಾರಿಕೆ ಕ್ಷೇತ್ರ ವಿಸ್ತರಿಸಲು ಶಾಸಕರು ಸೂಚಿಸಿದರು. ಇದಕ್ಕೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಉತ್ತರಿಸಿ ,ತಾಲ್ಲೂಕಿನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಕ್ಷೇತ್ರ 400 ರಿಂದ 500 ಹೆಕ್ಟರ್ ಪ್ರದೇಶ ಹೆಚ್ಚಾಗಿದೆ. 2022-23ರಲ್ಲಿ ನರೇಗಾದಡಿ ಅಂದಾಜು 70 ಸಾವೀರ ಮಾನವದಿನ ಸೃಜನೆಗುರಿ ನಿಗದಿಪಡಿಸಲಾಗಿತ್ತು, ಇದಕ್ಕೆ ವಿರುದ್ಧವಾಗಿ 90 ಸಾವಿರ ಮಾನವ ದಿನ ಸೃಜಿಸುವ ಮೂಲಕ ನಿಗದಿತ ಗುರಿಗಿಂತ ಹೆಚ್ಚಿನ ಪ್ರಗತಿ ಸಾಧಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ 1 ಲಕ್ಷಕ್ಕೂಅಧಿಕ ಮಾನವ ದಿನಗಳ ಗುರಿ ನೀಡಿದ್ದು, ಈಗಾಗಲೇ 15 ಸಾವಿರದಷ್ಟು ಮಾನವ ದಿನ ಸೃಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ತಾಲೂಕಿನ ಗ್ರಾಮೀಣ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಮತ್ತುರಾಜ್ಯ ಸರಕಾರದ ಅನೇಕ ಅನುದಾನದ ಜೊತೆಗೆ  ಉದ್ಯೋಗಖಾತ್ರಿ ಯೋಜನೆಯಡಿ ಲಭ್ಯವಿರುವ ಕಾಮಗಾರಿಗಳನ್ನು ಕೈಗೊಂಡು ನರೇಗಾದ ಸಂಪೂರ್ಣ ಲಾಭ ಪಡೆಯುವುದು ಸಂಬoಧಪಟ್ಟ ಇಲಾಖೆಯ ಅಧಿಕಾರಿಗಳ, ಗ್ರಾಪಂಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್‌ಅಭಿವೃದ್ಧಿ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.
ಪ್ರಸಕ್ತ ವರ್ಷದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದ್ದು, ತಾಲ್ಲೂಕಿನ ಎಲ್ಲಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾದಂತಹ ಸಾಂಕ್ರಾಮಿಕ ಕಾಯಿಲೆಯ ಪ್ರಕರಣಗಳು ಕಂಡುಬರದAತೆ ತಾಲ್ಲೂಕು ಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ವೈದ್ಯರು ಸಣ್ಣಪುಟ್ಟ ವಿಷಯಗಳಿಗೂ ತಾಲ್ಲೂಕಿನ ಬಡ ರೋಗಿಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಕಳುಹಿಸುತ್ತಿರುವುದು ಬೇಸರದ ಸಂಗತಿ. ಇಂಥಹ ಘಟನೆಗಳು ಪುನರಾವರ್ತನೆ ಆಗದಂತೆ ಎಚ್ಚರವಹಿಸಬೇಕು ಎಂದರು.
ಸಭೆಗೂ ಪೂರ್ವದಲ್ಲಿ ಶಾಸಕರು ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕಾ ಕಾರ್ಯಕ್ರಮದ ಫೋಸ್ಟರ್ ಬಿಡುಗಡೆ, ಎನ್‌ಆರ್‌ಎಲ್‌ಎಂ ಯೋಜನೆಯಡಿ ಸ್ವಸಹಾಯ ಸಂಘಗಳ ಸದಸ್ಯರು ಅತಿಥಿ ಗಣ್ಯರಿಗೆ ಗೌರವಪೂರ್ವಕವಾಗಿ ನೀಡಲು ತಯಾರಿಸಿದ ವಿವಿಧ ಆದಾಯೋತ್ಪನ್ನಗಳನ್ನು ಒಳಗೊಂಡ ಉಡುಗೊರೆ ಬುಟ್ಟಿ ಸ್ವೀಕರಿಸಿ ಪ್ರಶಂಸೆ ವ್ಯಕ್ತಪಡಿಸಿದರು. 2022-23 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 90 ರಷ್ಟು ಅಂಕ ಗಳಿಸಿದ ಮೂರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಮತ್ತುಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯಡಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಿದರು.
ಸಭೆಯಲ್ಲಿ ತಹಶಿಲ್ದಾರ ಶಂಕರಗೌಡಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿಟಿ.ವೈ. ದಾಸನಕೊಪ್ಪ, ಸಿಪಿಐ ರಂಗನಾಥ ನೀಲಮ್ಮನವರ, ಎಸಿಎಫ್ ರವಿ ಹುಲಕೋಟಿ, ಪ.ಪಂ ಮುಖ್ಯಾಧಿಕಾರಿ ಬಿ. ಚಂದ್ರಶೇಖರ, ನರೇಗಾ ಸಹಾಯ ನಿರ್ದೇಶಕ ಸೋಮಲಿಂಗಪ್ಪ ಛಬ್ಬಿ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಳು, ಎಲ್ಲಗ್ರಾಪಂಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು, ಉಪಾಧ್ಯಕ್ಷರು, ಐಇಸಿ, ಎಂಐಎಸ್ ಸಂಯೋಜಕರು, ಎನ್‌ಆರ್‌ಎಲ್‌ಎಂ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ADVERTISEMENT

 

Advertisement. Scroll to continue reading.
Advertisement. Scroll to continue reading.
Previous Post

ಯಲ್ಲಾಪುರ ಕ್ಷೇತ್ರಕ್ಕೆ ಶಾಸಕರಿಲ್ಲ!

Next Post

ಕುಮಟಾದಲ್ಲಿ `ಜಯಾ’ ಭತ್ತಕ್ಕೆ ಭಾರೀ ಬೇಡಿಕೆ

Next Post

ಕುಮಟಾದಲ್ಲಿ `ಜಯಾ' ಭತ್ತಕ್ಕೆ ಭಾರೀ ಬೇಡಿಕೆ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ