ಶಿರಸಿ: `ಅರಣ್ಯವಾಸಿಗಳ ಅರ್ಜಿ ಪುನರ್ ಪರಿಶೀಲನೆಗೆ ಕಾನೂನಾತ್ಮಕ ಆಕ್ಷೇಪ ವ್ಯಕ್ತವಾಗಿರುವ ಬಗ್ಗೆ ಮುಖ್ಯಮಂತ್ರಿಗೆ ಪತ್ರ ಬರೆದು ವಿವರಿಸುವೆ’ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.
ಬುಧವಾರ ಬೆಂಗಳೂರಿನಲ್ಲಿ ಅರಣ್ಯ ಹಕ್ಕು ಹೋರಾಟಗಾರು ಸತೀಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಕಾನೂನು ತೊಡಕುಗಳ ಬಗ್ಗೆ ವಿವರಿಸಿದರು. `ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ರಾಜ್ಯ ಅರಣ್ಯ ಭೂಮಿ ಹಕ್ಕು ಮೇಲ್ಚಿಚಾರಣಾ ಸಮಿತಿಯ ನಿರ್ಣಯ ಕಾಯ್ದೆಗೆ ವಿರುದ್ಧ’ ಎಂದು ನ್ಯಾಯವಾದಿ ರವೀಂದ್ರ ನಾಯ್ಕ ವಿವರಿಸಿದರು.
ಈ ವೇಳೆ ಹಿರಿಯ ಸಾಮಾಜಿಕ ದುರಿಣ ಅನಂತ ನಾಯ್ಕ ಅವರು ಕಾನೂನಾತ್ಮಕ ಅಂಶಗಳನ್ನು ವಿಶ್ಲೇಷಿಸಿದರು. `ಅರಣ್ಯ ಹಕ್ಕು ಕಾಯಿದೆ ಅನುಷ್ಠಾನದಲ್ಲಿ ರಾಜ್ಯ ಸರ್ಕಾರವು ಅರಣ್ಯವಾಸಿಗಳ ಪರವಾಗಿದೆ. ಮಂಜೂರಿ ಪ್ರಕಿಯೆಯಲ್ಲಿ ಅರಣ್ಯವಾಸಿಗಳ ಪರವಾಗಿ ಸರ್ಕಾರದ ನಿಲುವು ವ್ಯಕ್ತಪಡಿಸಲಾಗುತ್ತದೆ’ ಎಂದು ಸಚಿವರು ಹೇಳಿದರು.



