ಕಾರವಾರ: `ವಿವಿಧ ಹಾಸ್ಟೇಲ್‌ಗಳಲ್ಲಿ ಓದುತ್ತಿರುವ ಮಕ್ಕಳಿಗೆ ಯಾವುದೇ ಸಮಸ್ಯೆ ಆಗದಂತೆ ಅಧಿಕಾರಿಗಳು ಮುನ್ನಚ್ಚರಿಕೆವಹಿಸಬೇಕು’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಹೇಳಿದ್ದಾರೆ.
`ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಸೂಕ್ತ ರಕ್ಷಣೆ ಒದಗಿಸಬೇಕು. ಆರೋಗ್ಯ ಮತ್ತು ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಅಲ್ಲಿರುವ ಮಕ್ಕಳಿಗೆ ಕುಡಿಯುವ ನೀರು, ಶೌಚಾಲಯ ಸೇರಿ ಯಾವುದೇ ಮೂಲಭೂತ ಸೌಕರ್ಯಕ್ಕೆ ಸಮಸ್ಯೆ ಆಗದಂತೆ ಅಧಿಕಾರಿಗಳು ಮುತುವರ್ಜಿವಹಿಸಬೇಕು’ ಎಂದವರು ಸೂಚಿಸಿದ್ದಾರೆ. ಇದರೊಂದಿಗೆ ಹಾಸ್ಟೆಲ್ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸರ್ವತೋಮುಖ ಅಭಿವೃದ್ಧಿ ಅಗತ್ಯವಿರುವ ರಚನಾತ್ಮಕ ಚಟುವಟಿಕೆಗಳನ್ನು ಅನಡೆಸಬೇಕು’ ಎಂದು ಹೇಳಿದ್ದಾರೆ.
ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಅಡಿ ಕಾರ್ಯನಿರ್ವಹಿಸುವ ಹಾಸ್ಟೇಲ್’ಗಳ ಬಗ್ಗೆ ಅವರು ವಿವರ ಪಡೆದಿದ್ದಾರೆ. ಈ ವೇಳೆ `ಹಾಸ್ಟೆಲ್‌ಗಳಲ್ಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆಯಲು ಪ್ರೋತ್ಸಾಹಿಸಬೇಕು. ಅವರ ವಿದ್ಯಾಭ್ಯಾಸದ ಕುರಿತು ವಾರ್ಡನ್‌ಗಳು ವಿಶೇಷ ಕಾಳಜಿವಹಿಸಬೇಕು. ಅವರ ಕಲಿಕೆಗೆ ಅಗತ್ಯವಿರುವ ಪುಸ್ತಕಗಳು ಮತ್ತು ಕಂಪ್ಯೂಟರ್ ವ್ಯವಸ್ಥೆ ಮಾಡಬೇಕು. ಯಾವ ವಿದ್ಯಾರ್ಥಿಯೂ ಶೇ 60ಕ್ಕಿಂತಲೂ ಕಡಿಮೆ ಅಂಕಪಡೆಯದ0ತೆ ನೋಡಿಕೊಳ್ಳಬೇಕು’ ಎಂದವರು ಸೂಚನೆ ನೀಡಿದರು.
`ಹಾಸ್ಟೆಲ್‌ನ ಲೈಬ್ರರಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವಂತಹ ಪುಸ್ತಕಗಳನ್ನು ಜೋಡಿಸಬೇಕು. ಉನ್ನತ ಸಾಧನೆ ಮಾಡುವ ಕುರಿತು ಮಕ್ಕಳಿಗೆ ಪ್ರೇರೇಪಿಸಬೇಕು. ಹಾಸ್ಟೆಲ್‌ಗಳಲ್ಲಿನ ಅಸುರಕ್ಷತೆಯ ಕಾರಣದಿಂದ ಯಾವುದೇ ಅವಘಡಗಳು ಉಂಟಾಗದAತೆ ಎಚ್ಚರಿಕೆವಹಿಸಬೇಕು’ ಎಂದು ಸೂಚಿಸಿದರು. `ಹಾಸ್ಟೇಲ್ ಮಕ್ಕಳ ಆರೋಗ್ಯದ ಕುರಿತು ವಾರ್ಡನ್ ತಮ್ಮ ಮನೆಯ ಮಕ್ಕಳ ರೀತಿ ಕಾಳಜಿವಹಿಸಬೇಕು. ಮಕ್ಕಳ ಜೊತೆ ಮುಕ್ತವಾಗಿ ಬೆರೆತು ಅವರ ಸಮಸ್ಯೆ ಆಲಿಸಿ, ಪರಿಹಾರ ಒದಗಿಸಬೇಕು’ ಎಂದರು.
`ಕಲುಷಿತ ನೀರು ಸರಬರಾಜು ಆಗದಂತೆ ಮುನ್ನೆಚ್ಚರಿಕೆವಹಿಸಬೇಕು. ನಿರಂತರವಾಗಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಬೇಕು. ಕಲಿಕೆಯ ಜೊತೆಗೆ ಅವರಿಗೆ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಿ ಕ್ರೀಡೆಯಲ್ಲಿ ಭಾಗವಹಿಸುವಂತೆ ಪ್ರೆರೇಪಿಸಬೇಕು. ಎಲ್ಲಾ ಹಾಸ್ಟೆಲ್‌ಗಳಲ್ಲಿ ಪ್ರತಿ ತಿಂಗಳು ಪ್ರಚಲಿತ ಮತ್ತು ಗಮನಾರ್ಹ ವಿಷಯಗಳ ಕುರಿತಂತೆ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಬೇಕು’ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ ಸೂಚಿಸಿದರು.




