6
  • Latest

ಕಲರ್ಸ ಕನ್ನಡದಲ್ಲಿ ಧಾರಾವಾಹಿಗಳ ಧಮಾಕಾ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

ಕಲರ್ಸ ಕನ್ನಡದಲ್ಲಿ ಧಾರಾವಾಹಿಗಳ ಧಮಾಕಾ!

AchyutKumar by AchyutKumar
in ಸಿನೆಮಾ

ಬೆಂಗಳೂರು: ಸಿನಿಮಾ ತಾರೆಯರಾದ ಶ್ರುತಿ ಮತ್ತು ಸಪ್ತಮಿ ಗೌಡ ಪರಿಚಯಿಸುವ ಎರಡು ಹೊಸ ಕತೆಗಳು ಕಲರ್ಸ್ ಕನ್ನಡ ಪರದೆಯ ಮೇಲೆ ಮೂಡಿಬರಲಿವೆ. ಕನ್ನಡ ವೀಕ್ಷಕರ ಮನಸ್ಸಿಗೆ ಲಗ್ಗೆಯಿಡುವ ಕತೆಗಳನ್ನು ಹೊಂದಿರುವ ಮತ್ತೆರೆಡು ಹೊಸ ಧಾರಾವಾಹಿಗಳನ್ನು ಕಲರ್ಸ್ ವಾಹಿನಿಯಲ್ಲಿ ನಿಮ್ಮ ಮುಂದೆ ತರಲು ಸಜ್ಜಾಗಿದೆ.

ADVERTISEMENT

‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ. 27 ರಂದು ಪ್ರಸಾರವಾಗಲಿವೆ. ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30 ಕ್ಕೆ ಪ್ರಸಾರ ಆಗಲಿದೆ. ಕಾಂಟ್ರಾಕ್ಟ್ ಮದುವೆ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರ ಆಗಲಿದೆ.

ವಧು ಧಾರಾವಾಹಿ: ಸಂಬoಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬoಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವoತೆ ಮಾಡಿದೆ ಎಂದರೂ ತಪ್ಪಾಗದು!

Advertisement. Scroll to continue reading.

ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗು ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್ ಕೇಸ್ ಫೈಲ್ ಮಾಡಿದಾಗ ವಧು ಹತ್ತಿರ ಸಹಾಯ ಕೋರಿ ಬರುತ್ತಾನೆ. ಈ ವೇಳೆ ಕತೆ ಕುತೂಹಲಕರ ತಿರುವು ಪಡೆಯುತ್ತದೆ.
ಸಂಬoಧಗಳನ್ನು ಪರೀಕ್ಷೆಗೊಳಪಡಿಸುವ ‘ವಧು’ ಧಾರಾವಾಹಿಯು ವೃತ್ತಿಧರ್ಮ ಮತ್ತು ಆತ್ಮಸಾಕ್ಷಿಗಳ ನಡುವಿನ ತಿಕ್ಕಾಟವನ್ನು ಹೇಳುತ್ತದೆ. ಪ್ರೀತಿ, ಮೋಸ ಮತ್ತು ನಂಬಿಕೆಗಳು ನಮ್ಮನ್ನು ಹೇಗೆಲ್ಲಾ ಘಾಸಿಗೊಳಿಸಬಹುದೆಂಬುದನ್ನು ಬಿಡಿಸಿಡುತ್ತದೆ. ತನ್ನ ಭಾವನೆಗಳ ಜೊತೆಗೆ ಗುದ್ದಾಡುತ್ತಲೇ ತನಗೆ ಸಿಕ್ಕಿರುವ ಈ ಹೊಸ ಕೇಸನ್ನು ವಧು ಸರಿಯಾಗಿ ನಿಭಾಯಿಸುತ್ತಾಳಾ? ಪ್ರೀತಿ ಮತ್ತು ಬದ್ಧತೆಗಳ ಬಗೆಗಿನ ಅವಳ ನಿಲುವುಗಳನ್ನು ಈ ಕೇಸ್ ಬದಲಾಯಿಸುತ್ತಾ ಅನ್ನುವುದೇ ಕತೆಯನ್ನು ಮುನ್ನೆಡೆಸುವ ಎಳೆ.

Advertisement. Scroll to continue reading.

ಹೆಸರಾಂತ ಕಲಾವಿದರಾದ ವಿನಯಾ ಪ್ರಸಾದ್, ಸುಧಾ ಬೆಳವಾಡಿ, ರವಿ ಭಟ್, ರವಿ ಕುಮಾರ್ ಮತ್ತು ರೇಖಾ ಸಾಗರ್ ಅವರು ಅಭಿನಹಿಸಿದ್ದಾರೆ. ಸಾರ್ಥಕ್ ಪಾತ್ರದಲ್ಲಿ ಲಕ್ಷಣ ಧಾರಾವಾಹಿ ಖ್ಯಾತಿಯ ಅಭಿಷೇಕ್ ಶ್ರೀಕಾಂತ್, ವಧು ಪಾತ್ರದಲ್ಲಿ ದುರ್ಗಾಶ್ರೀ ಮತ್ತು ಪ್ರಿಯಾಂಕಾ ಪಾತ್ರದಲ್ಲಿ ಸೋನಿ ಮುಲೇವಾ ನಟಿಸಲಿದ್ದಾರೆ. ಕುತೂಹಲ ಮತ್ತು ನಾಟಕೀಯ ಸನ್ನಿವೇಶಗಳ ಸಂಗಮವಾಗಿರುವ ‘ವಧು’ ವೀಕ್ಷಕರ ಮನ ಸೂರೆಗೊಳ್ಳುವುದರಲ್ಲಿ ಸಂಶಯವಿಲ್ಲ. ಈಗಾಗಲೇ ಪ್ರೊಮೊ ಮೂಲಕ ಸಿಎಸ್ ಪಿ ಪಾತ್ರ ಎಲ್ಲರ ಮನಸನ್ನ ಗೆದ್ದಿದ್ದು, ಪ್ರೇಕ್ಷಕರ ಕುತೂಹಲ ಹೆಚ್ಚಿಸಿದೆ.

ಯಜಮಾನ ಧಾರಾವಾಹಿ: ಚೂರೂ ಸ್ವಾರ್ಥವಿಲ್ಲದ ಸರಳ ವ್ಯಕ್ತಿ ರಘುಗೆ ತನ್ನ ಕುಟುಂಬದ ಪ್ರೀತಿ ಗಳಿಸುವ ಮಹದಾಸೆ. ಝಾನ್ಸಿ ಹಾಗಲ್ಲ. ತಾತನ ಮಡಿಲಲ್ಲಿ ಬೆಳೆದ ಈಕೆ ಗಂಡಸರನ್ನು ದ್ವೇಷಿಸುವ ಹಠಮಾರಿ ಹುಡುಗಿ. ವಿಧಿ ಇವರಿಬ್ಬರನ್ನೂ ಒಂದು ಮದುವೆಯ ರೂಪದಲ್ಲಿ ಹತ್ತಿರ ತರುತ್ತದೆ. ತನ್ನ ಕಷ್ಟದಲ್ಲಿರುವ ಕುಟುಂಬದ ಒಳಿತಿಗೆ ಈ ಮದುವೆ ದಾರಿಯಾದೀತೆಂದು ಬಗೆಯುವ ರಘು ಮದುವೆಗೆ ಒಪ್ಪುತ್ತಾನೆ. ಮದುವೆಯ ನಂತರ ಅನೇಕ ಅನೂಹ್ಯ ತಿರುವುಗಳು ಬಂದು ಕತೆಯನ್ನು ಮತ್ತೆಲ್ಲಿಗೋ ಸೆಳೆದೊಯ್ಯುತ್ತವೆ. ರಘು ಮತ್ತು ಝಾನ್ಸಿ ತಮ್ಮ ವ್ಯಕ್ತಿತ್ವದಲ್ಲಿರುವ ಭಿನ್ನತೆಯನ್ನು ಎದುರಿಸಬೇಕಾಗುತ್ತದೆ. ಅನುಕೂಲಕ್ಕೆಂದು ಆರಂಭವಾದ ಅವರಿಬ್ಬರ ಸಂಬoಧ ಈಗ ಗಾಢವಾಗುತ್ತಾ ಬೆಳೆದರೂ ಯಾವುದೇ ಕ್ಷಣದಲ್ಲೂ ಒಡೆದುಹೋಗುವ ಭಯವನ್ನೂ ಹುಟ್ಟಿಸುತ್ತದೆ.

ಪ್ರೀತಿ, ಮಹತ್ವಾಕಾಂಕ್ಷೆ ಮತ್ತು ಸ್ವಾರ್ಥದ ಆಟ ‘ಯಜಮಾನ’ದ ಕತೆಯನ್ನು ಬೆಳೆಸುತ್ತಾ ಹೋಗುವ ತಂತು. ರಘು ಮತ್ತು ಝಾನ್ಸಿ ಎಂದಾದರೂ ಬದುಕು ತಮಗೆ ಒಡ್ಡುವ ಸವಾಲುಗಳನ್ನು ಗೆಲ್ಲುತ್ತಾರಾ? ಅಥವಾ ಅವರ ವ್ಯಕ್ತಿತ್ವದಲ್ಲಿರುವ ಭಿನ್ನತೆಯೇ ಅವರನ್ನು ದೂರಾಗಿಸುತ್ತದೆಯಾ? ಉತ್ತರಕ್ಕೆ ಸಂಚಿಕೆಗಳನ್ನು ಕಾದು ನೋಡಬೇಕು. ಹೊಸ ಮುಖಗಳಾದ ಹರ್ಷ ಬಿ. ಎಸ್. ಮತ್ತು ಮಧುಶ್ರೀ ಭೈರಪ್ಪ ‘ಯಜಮಾನ’ದ ಮುಖ್ಯ ಭೂಮಿಕೆಯಲ್ಲಿದ್ದಾರೆ. ಅವರಿಗೆ ಬೆಂಬಲವಾಗಿ ರಮೇಶ್ ಭಟ್, ನಾಗಾಭರಣ, ಮಂಜುಳ, ಅಂಕಿತಾ ಜೈರಾಮ್, ತಿಲಕ್, ಸ್ಪೂರ್ತಿ, ಪ್ರದೀಪ್ ಮತ್ತು ವಿಶ್ವ ಇಲ್ಲಿದ್ದಾರೆ.

‘ವಧು’ ಮತ್ತು ‘ಯಜಮಾನ’ ಎರಡೂ ಕತೆಗಳು ಆಧುನಿಕ ಬದುಕಿನ ಸಂಬoಧಗಳ ಹೊಸ ಸಂಕೀರ್ಣತೆಯನ್ನು ಎಳೆಎಳೆಯಾಗಿ ಬಿಡಿಸಿಡುವ ಹೊಸ ಬಗೆಯ ಕತೆಗಳು. ಭಾವನೆಗಳ ಸಂಘರ್ಷವನ್ನು ಅದರ ಮಿತಿಗಳಾಚೆಗೆ ಜಗ್ಗಿ ಪರೀಕ್ಷಿಗೊಳಪಡಿಸುವ ಈ ಎರಡು ಕತೆಗಳನ್ನು ನೋಡಲು ಮರೆಯದಿರಿ.

Previous Post

ಸಮಸ್ಯೆ ಆಲಿಸಿದ ಸಂಸದ: 12ಮೀಟರಿನ ರಸ್ತೆಗೆ ಏಳು ಮೀಟರ್ ಸೇತುವೆ!

Next Post

ಆಶಾನಿಕೇತನ | ಕಿವುಡ ಮತ್ತು ಮೂಗ ಮಕ್ಕಳ ಸಾಧನೆಗೆ ಬಹುಮಾನ!

Next Post

ಆಶಾನಿಕೇತನ | ಕಿವುಡ ಮತ್ತು ಮೂಗ ಮಕ್ಕಳ ಸಾಧನೆಗೆ ಬಹುಮಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ