ಉತ್ತರ ಕನ್ನಡ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಗಳಲ್ಲಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಚಾರಕರ ಹುದ್ದೆ ಖಾಲಿಯಿದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಮಾಸಿಕ ಗೌರವ ಸಂಭಾವನೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳುವುದಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಶಿರಸಿ ತಾಲೂಕಿನ ಜಾನ್ಮನೆ ಗ್ರಾಮ ಪಂಚಾಯತಗೆ ಪ್ರವರ್ಗ-3(ಎ) ಯೋಜನಾ ನಿರಾಶ್ರಿತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಯಲ್ಲಾಪುರ ತಾಲೂಕಿನ ದೇಹಳ್ಳಿ ಗ್ರಾಮ ಪಂಚಾಯತ ಪ್ರವರ್ಗ-2(ಎ) ಗ್ರಾಮೀಣ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದೆ. ಅಭ್ಯರ್ಥಿಯು ದ್ವಿತೀಯ ಪದವಿ ಪೂರ್ವ ಪರೀಕ್ಷೆ (ಪಿಯುಸಿ) ಯಲ್ಲಿ ಉತ್ತೀರ್ಣರಾಗಿರಬೇಕು. ಸರ್ಟಿಪಿಕೇಷನ್ ಕೋರ್ಸ ಇನ್ ಲೈಬ್ರರಿ ಸೈನ್ಸ್ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಿAದ ಕನಿಷ್ಠ ಮೂರು ತಿಂಗಳ ಕಂಪ್ಯೂಟರ್ ಕೋರ್ಸನಲ್ಲಿ ಉತ್ತೀರ್ಣರಾಗಿರಬೇಕು ಎಂಬ ನಿಯಮಗಳಿವೆ.
ಜಾನ್ಮನೆ ಮತ್ತು ದೇಹಳ್ಳಿಗೆ ಅರ್ಜಿ ಸಲ್ಲಿಸುವವರು ಅದೇ ಗ್ರಾಮ ಪಂಚಾಯತ ವ್ಯಾಪ್ತಿಯ ನಿವಾಸಿಯಾಗಿರಬೇಕು. ಸ್ಥಳೀಯ ಪ್ರಾಧಿಕಾರದಿಂದ ವಸತಿ ಪ್ರಮಾಣ ಪತ್ರವನ್ನು ಅರ್ಜಿಯ ಜೊತೆಗಿರಿಸಬೇಕು. ಮೀಸಲಾತಿ ಪತ್ರ, ಅಂಕಪಟ್ಟಿ ಸೇರಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಗ್ರಾಮ ಪಂಚಾಯತ ಕಚೇರಿಗೆ ತೆರಳಿ ಅರ್ಜಿ ಪಡೆಯಬಹುದಾಗಿದ್ದು, ಫೆ 20 ಅರ್ಜಿ ಸಲ್ಲಿಕೆಗೆ ಕೊನೆಯ ದಿನ.