ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ 112 ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗಿದೆ. ಅದರಲ್ಲಿ 9 ಜನ ಸಾವನಪ್ಪಿದ್ದಾರೆ.
ಕಾಡು ಪ್ರಾಣಿಯಿಂದ ಮರಣ ಹೊಂದಿದವರಿಗೆ ಅರಣ್ಯ ಕಾಯ್ದೆಯಡಿಯಲ್ಲಿ 15 ಲಕ್ಷ ರೂ ಪರಿಹಾರ ನೀಡಲು ಅವಕಾಶವಿದೆ. ಅದರಂತೆ ಇದೀಗ ಮಂಗನ ಕಾಯಿಲೆಯಿಂದ ಮರಣ ಹೊಂದಿದವರಿಗೆ ಸಹ ಈ ಪರಿಹಾರ ಒದಗಿಸಬೇಕು ಎಂಬ ಆಗ್ರಹ ಕೇಳಿಬಂದಿದ್ದು, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಚಿವ ಮಂಕಾಳು ವೈದ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಾಗಿ ಈ ವಾರ ಪ್ರಸ್ತಾವನೆ ಸಲ್ಲಿಕೆಯಾಗುವ ಸಾಧ್ಯತೆ ಹೆಚ್ಚಿದೆ. ಎಲ್ಲವೂ ಅಂದುಕೊAಡAತೆ ನಡೆದರೆ, ಮಂಗನ ಕಾಯಿಲೆಯಿಂದ ಸಾವನಪ್ಪಿದ 9 ಜನರ ಕುಟುಂಬಕ್ಕೂ ಆಸರೆ ದೊರೆಯಲಿದೆ.
`ಮಂಗನ ಕಾಯಿಲೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚಿಸಿದೆ.
Discussion about this post