`ಮೀನುಗಾರಿಕೆ ಸೇರಿ ಹಲವು ಕ್ಷೇತ್ರಗಳ ಉತ್ತೇಜನಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮೂಲಕ ಕೊಡುಗೆ ನೀಡಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಹೇಳಿದ್ದಾರೆ.
`ಮಧ್ಯಮ ವರ್ಗದ ಜನರನ್ನು ಎಲ್ಲರೂ ನಿರ್ಲಕ್ಷಿಸುತ್ತಿದ್ದರು. ಆದರೆ, ನಿರ್ಮಲಾ ಸೀತಾರಾಮನ್ ಅವರು ಮಧ್ಯಮ ವರ್ಗದ ಜನರನ್ನು ಗುರಿಯಾಗಿರಿಸಿಕೊಂಡು ಉತ್ತಮ ಬಜೆಟ್ ಮಂಡಿಸಿದ್ದಾರೆ’ ಎಂದವರು ಹೇಳಿದ್ದಾರೆ. `ಮೀನುಗಾರಿಕೆ ಉತ್ತೇಜನಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಮೀನುಗಾರಿಕೆ ಕ್ಷೇತ್ರಕ್ಕೆ 60 ಸಾವಿರ ಕೋಟಿ ರೂ ಮೀಸಲಿಟ್ಟಿದ್ದಾರೆ. ಇದು ಸಂತಸದ ವಿಷಯ’ ಎಂದವರು ಹೇಳಿದ್ದಾರೆ.
`ಕ್ಯಾನ್ಸರ್ ಸೇರಿದಂತೆ ಅಗತ್ಯ 32 ಔಷಧಗಳಿಗೆ ತೆರಿಗೆ ವಿನಾಯಿತಿ ನೀಡಿರುವುದು ಸ್ವಾಗತಾರ್ಹ. ಗ್ರಾಮೀಣ ಅಭಿವೃದ್ಧಿಗೆ ಅತಿ ಹೆಚ್ಚಿನ ಅನುದಾನ ಮೀಸಲಿಟ್ಟಿರುವುದು ಉತ್ತಮ. ಬಡ ವರ್ಗಗಳ ಏಳಿಗೆಗೆ ಯೋಜನೆಗಳನ್ನು ಘೋಷಿಸಿರುವುದು ಒಳ್ಳೆಯ ಬೆಳವಣಿಗೆ’ ಎಂದವರು ಅಭಿಪ್ರಾಯಪಟ್ಟಿದ್ದಾರೆ.