ಗುಣಮಟ್ಟದ ಶಿಕ್ಷಣದ ಜೊತೆ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತಿರುವ ಕುಮಟಾ ಮಿರ್ಜಾನಿನ ಆದಿಚುಂಚನಗಿರಿ ಇಂಡಿಪೆoಡೆoಟ್ ಪಿಯು ಕಾಲೇಜು ಭಾರತ ಸಂವಿಧಾನದ ವಜ್ರ ಮಹೋತ್ಸವ ಹಾಗೂ ಸ್ವಾಮಿ ವಿವೇಕಾನಂದರ 162ನೇ ಜಯಂತ್ಯೋತ್ಸವದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಕಾರ್ಯಕ್ರಮ ಆಯೋಜಿಸಿದೆ.
ಫೆ 16ರಂದು ಕಲೆ, ಸಾಹಿತ್ಯ, ಸಂಸ್ಕೃತಿ, ರಾಜ್ಯಾಡಳಿತ ಮತ್ತು ಸಂವಿಧಾನ, ಇತಿಹಾಸ ಮತ್ತು ಭೂಗೋಳಶಾಸ್ತ್ರ, ವಿಜ್ಞಾನ ತಂತ್ರಜ್ಞಾನ, ಕ್ರೀಡೆ, ಮನರಂಜನೆ ಹಾಗೂ ಪ್ರಚಲಿತ ವಿದ್ಯಮಾನಗಳ ವಿಷಯವಾಗಿ ಈ ಸ್ಪರ್ಧೆ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 10 ಸಾವಿರ ರೂ ಬಹುಮಾನ ಸಿಗಲಿದೆ. ದ್ವಿತೀಯ ಸ್ಥಾನ ಪಡೆದವರಿಗೆ 7 ಸಾವಿರ ರೂ, ತೃತೀಯ ಸ್ಥಾನ ಪಡೆದವರಿಗೆ 5 ಸಾವಿರ ರೂ ಬಹುಮಾನವಿದೆ. ಇದಲ್ಲದೇ 4, 5 ಹಾಗೂ 6ನೇ ಸ್ಥಾನಪಡೆದವರಿಗೆ ತಲಾ 2 ಸಾವಿರ ರೂ ಬಹುಮಾನವನ್ನು ನೀಡಲಾಗುತ್ತದೆ. ಸ್ಪರ್ಧಾ ವಿಜೇತರೆಲ್ಲರಿಗೂ ಬೆಳ್ಳಿ ಪದಕ ನೀಡಿ ಗೌರವಿಸಲಾಗುತ್ತದೆ. ಪ್ರತಿಭಾನ್ವಿತ 50 ವಿದ್ಯಾರ್ಥಿಗಳಿಗೆ ಬೆಳ್ಳಿಯ ಪದಕ ಬಹುಮಾನವಿದೆ. ಮೊದಲ ಮೂರು ಬಹುಮಾನ ವಿಜೇತರಿಗೆ ಆಕರ್ಷಕ ಟ್ರೋಫಿಯನ್ನು ನೀಡಲಾಗುತ್ತದೆ.
ಸ್ಪರ್ಧೆಯಲ್ಲಿ ಭಾಗವಹಿಸಲು ಯಾವುದೇ ಪ್ರವೇಶ ಶುಲ್ಕವಿಲ್ಲ. ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಮತ್ತು ಉತ್ತರ ಕನ್ನಡ ಶಾಖಾಮಠದ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರ ನೇತ್ರತ್ವದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮಿರ್ಜಾನ್ ಶಾಖಾ ಮಠದ ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡುತ್ತಿದ್ದಾರೆ.
ಹೆಸರು ನೋಂದಾಯಿಸಲು ಫೆ 12ಕ್ಕೆ ಕೊನೆ ದಿನ. ಅದಾಗಿಯೂ ಫೆ 16ರ ಬೆಳಗ್ಗೆ ಸಂಸ್ಥೆ ಆವರಣದಲ್ಲಿಯೂ ಹೆಸರು ನೋಂದಾಯಿಸಲು ಅವಕಾಶ ನೀಡಲಾಗಿದೆ. ಈ ಬಗ್ಗೆ ಮಾಹಿತಿಗೆ ಇಲ್ಲಿ ಫೋನ್ ಮಾಡಿ: ರೇಶ್ಮಾ ಬಾಡ್ಕರ್ : 9900339912, ತೇಜಸ್ವಿನಿ ಪಟಗಾರ: 9901168720 ಅಥವಾ ಪ್ರತಾಪ ಪ್ರಭು 7892602617
ನಿಮ್ಮೂರ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಈ ಮಾಹಿತಿ ಶೇರ್ ಮಾಡಿ