ಅಪೂರ್ಣ ಅರಣ್ಯ ಹಕ್ಕು ಸಮಿತಿಯಿಂದ ನಾಮ ನಿರ್ದೇಶೀತ ಸದಸ್ಯರ ಅನುಪಸ್ಥಿತಿಯಲ್ಲಿ ಅರಣ್ಯವಾಸಿಗಳ ಅರ್ಜಿಗಳನ್ನು ಪುನರ್ ಪರಿಶೀಲಿಸುತ್ತಿರುವುದಕ್ಕೆ ಕಾನೂನು ಇಲಾಖೆ ಆಕ್ಷೇಪವ್ಯಕ್ತಪಡಿಸಿದೆ. ಈ ಹಿನ್ನಲೆ ಅರಣ್ಯವಾಸಿಗಳ ಪುನರ್ ಪರಿಶೀಲನಾ ಪ್ರಕ್ರಿಯೆ ಸ್ಥಗಿತವಾಗಲಿದೆ.
ಈ ಬಗ್ಗೆ ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಮಾಹಿತಿ ನೀಡಿದ್ದಾರೆ. ನಾಮನಿರ್ದೇಶಿತ ಸದಸ್ಯರ ಅನುಪಸ್ಥಿತಿಯಲ್ಲಿ ಮುಂದಿನ 2 ತಿಂಗಳದ ಕಾಲಮಿತಿಯ ಒಳಗೆ ಅರಣ್ಯವಾಸಿಗಳ ಅರ್ಜಿಗಳನ್ನು ಪುನರ್ ಪರಿಶೀಲನಾ ಕಾರ್ಯ ಜರುಗಿಸುವಂತೆ ರಾಜ್ಯ ಮೇಲ್ವಿಚಾರಣಾ ಸಮಿತಿ ನವೆಂಬರ 28ರಂದು ನಿರ್ದೇಶನ ನೀಡಿತ್ತು. ಈ ಆದೇಶಕ್ಕೆ ಹೋರಾಟಗಾರರ ವೇದಿಕೆಯು ಕಾನೂನಾತ್ಮಕ ಆಕ್ಷೇಪ ವ್ಯಕ್ತಪಡಿಸಿತ್ತು.
ಹೀಗಾಗಿ ಕಾನೂನು ಇಲಾಖೆಯಿಂದ ಸರಕಾರದ ಮುಖ್ಯ ಕಾರ್ಯದರ್ಶಿಗಳು ನಾಮನಿರ್ದೇಶೀತ ಸದಸ್ಯರ ಅನುಪಸ್ಥಿತಿಯಲ್ಲಿ ಪುನರ್ ಪರಿಶೀಲನೆ ಕಾರ್ಯವು ಕಾನೂನು ಉಲ್ಲಂಘನೆ ಎಂದು ಅಭಿಪ್ರಾಯಪಟ್ಟಿದೆ. ರಾಜ್ಯದಲ್ಲಿ ಪಂಚಾಯತಿ ರಾಜ್ಯ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಡೆಯದಿರುವುದರಿಂದ ಸವೋಚ್ಛ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಲು ಸಾಧ್ಯವಾಗುತ್ತಿಲ್ಲ ಎಂಬ ವಿಷಯವನ್ನು ಕಾನೂನು ಇಲಾಖೆ ಗಂಭಿರವಾಗಿ ಪರಿಗಣಿಸಿದೆ.



