2019ರಿಂದ 2023ರವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ 43 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮುಂಡಗೋಡ ತಾಲೂಕಿನಲ್ಲಿ ಹೆಚ್ಚಿನ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದು, ಬ್ಯಾಂಕ್ ಅಧಿಕಾರಿಗಳ ಒತ್ತಡದಿಂದ ಸಾವನಪ್ಪಿದವರ ಸಂಖ್ಯೆಯೇ ಜಾಸ್ತಿ. ಈ ಹಿನ್ನಲೆ ಬ್ಯಾಂಕುಗಳಿಗೆ ರೈತರಿಗೆ ನೀಡಿರುವ ಸಾಲ ವಸೂಲಿಗೆ ಸಂಬoಧಿಸಿದoತೆ ಜಿಲ್ಲಾಡಳಿತ ಸೂಚನೆ ನೀಡಿದೆ. ರೈತರು ಆರ್ಥಿಕವಾಗಿ ಸಬಲವಾಗುವರೆಗೂ ಸಾಲ ಪಾವತಿಸಲು ಒತ್ತಡ ಹಾಗೂ ಕಿರುಕುಳ ನೀಡದಂತೆ ಸೂಚಿಸಲಾಗಿದೆ.
ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ಸರ್ಕಾರದಿಂದ ಮಾಸಿಕ 2 ಸಾವಿರ ರೂ ನೀಡಲಾಗುತ್ತಿದೆ. ಯಾರಿಗೆ ಈ ಹಣ ತಲುಪುತ್ತಿಲ್ಲ ಎನ್ನುವ ಬಗ್ಗೆ ತಹಶೀಲ್ದಾರ್ ಅವರಿಗೆ ತಿಳಿಸಲು ಸೂಚಿಸಲಾಗಿದೆ. ಆತ್ಮಹತ್ಯೆಗೆ ಶರಣಾದ ರೈತರ ಮಕ್ಕಳ ವಿದ್ಯಾಬ್ಯಾಸಕ್ಕೆ ತೊಂದರೆ ಆಗದಂತೆ ನೋಡಲು ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚನೆ ನೀಡಿದೆ.
Discussion about this post