ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ರೈತ ಆತ್ಮಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ ರೈತರು ತಮ್ಮ ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಹೇಳಿಕೊಳ್ಳಬೇಕು ಎಂದು ಕರೆ ನೀಡಿದೆ.
`ದೇಶಕ್ಕೆ ಅನ್ನ ನೀಡುವ ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆಯಂತಹ ಕಠಿಣ ನಿರ್ಧಾರ ಮಾಡಬಾರದು. ರೈತರ ಸಮಸ್ಯೆಗೆ ಸ್ಪಂದಿಸಲು ಜಿಲ್ಲಾಡಳಿತ ಬದ್ಧವಾಗಿದೆ’ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದ್ದಾರೆ.
ರೈತರ ಆತ್ಮಹತ್ಯೆ ಪ್ರಕರಣ ಕುರಿತ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಾತನಾಡಿದ ಅವರು `ರೈತರು ಆತ್ಮಹತ್ಯೆ ಮಾಡಿಕೊಂಡರೆ ಅವರ ಕುಟುಂಬ ಸಾಕಷ್ಟು ಸಂಕಷ್ಟ ಅನುಭವಿಸುತ್ತದೆ. ಸರ್ಕಾರ ಸದಾ ರೈತರ ಜೊತೆಗಿರುತ್ತದೆ. ರೈತರು ತಮ್ಮ ಕಷ್ಟದ ಬಗ್ಗೆ ಜಿಲ್ಲಾಡಳಿತಕ್ಕೆ ತಿಳಿಸಬೇಕು. ಇಲ್ಲವಾದಲ್ಲಿ `1950’ಗೆ ಕರೆ ಮಾಡಿ ಮಾಹಿತಿ ಹಂಚಿಕೊಳ್ಳಿ’ ಎಂದು ಹೇಳಿದ್ದಾರೆ. `ಜಿಲ್ಲೆಯ ಎಲ್ಲಾ ರೈತರು ತಮ್ಮ ಜಮೀನಿನ ಪಹಣಿಗೆ ಆಧಾರ್ ಜೋಡಣೆ ಮಾಡಿಕೊಳ್ಳುವ ಮೂಲಕ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳ ಲಾಭ ಪಡೆಯಬೇಕು’ ಎಂದು ಅವರು ಕರೆ ನೀಡಿದ್ದಾರೆ.
Discussion about this post