6

ಪಾದಚಾರಿಗೆ ಗುದ್ದಿದ ಲಾರಿ: ಸಾವು

ರಸ್ತೆ ಅಂಚಿನಲ್ಲಿ ಚಲಿಸುತ್ತಿದ್ದ ಪಾದಚಾರಿಗೆ ಲಾರಿಯೊಂದು ಗುದ್ದಿದೆ. ಪರಿಣಾಮ ಪಾದಚಾರಿಯ ದೇಹ ಚೂರು ಚೂರಾಗಿದೆ.

ಮುಂಡಗೋಡದ ಶಿವಾಜಿ ಸರ್ಕಲ್ ಬಳಿ ಫೆ 14ರ ಸಂಜೆ ಈ ಅವಘಡ ನಡೆದಿದೆ. ಎಂ ಸ್ಯಾಂಡ್ ತುಂಬಿಕೊoಡು ಹೊರಟಿದ್ದ ಲಾರಿ ಪಾದಚಾರಿಗೆ ಗುದ್ದಿದ್ದರಿಂದ ವ್ಯಕ್ತಿ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಅಪಘಾತದ ರಭಸಕ್ಕೆ ವ್ಯಕ್ತಿಯ ದೇಹ ಛಿದ್ರಗೊಂಡಿದೆ. ಸಾವನಪ್ಪಿದ ವ್ಯಕ್ತಿಯ ಬಗ್ಗೆ ಈವರೆಗೆ ಮಾಹಿತಿ ಸಿಕ್ಕಿಲ್ಲ.

ಸ್ಥಳದಲ್ಲಿ ಬಿದ್ದಿದ್ದ ದೇಹವನ್ನು ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಯಿತು. ರಸ್ತೆ ಮೇಲೆ ಭಾರೀ ಪ್ರಮಾಣದ ರಕ್ತ ಬಿದ್ದಿದ್ದರಿಂದ ಜನ ಆತಂಕಕ್ಕೆ ಒಳಗಾದರು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    You cannot copy content of this page