6

ಭಟ್ಕಳದ ಚೆಲುವಿಗೆ ಬೆಂಗಳೂರಿಗರು ಫೀದಾ!

ಬೆಂಗಳೂರಿನ ಕಲಾ ನವೀನ್ ಫೀಲಂ ಅಕಾಡೆಮಿ ಆಯೋಜಿಸಿದ `ಮಿಸ್ ಗ್ರಾಂಡ್ ಸೌತ್ ಇಂಡಿಯಾ 2024-25 ಫ್ಯಾಷನ್ ಶೋ’ ಸ್ಪರ್ಧೆಯಲ್ಲಿ ಭಟ್ಕಳದ ಸಂಜನಾ ನಾಯ್ಕ ಪ್ರಥಮ ಸ್ಥಾನ ಪಡೆದಿದ್ದಾರೆ. ಆ ಮೂಲಕ ಸ್ಪರ್ಧೆಯ ಚಾಂಪಿಯನ್‌ಶಿಫ್’ನ್ನು ಅವರು ತಮ್ಮದಾಗಿಸಿಕೊಂಡಿದ್ದಾರೆ.

ಬೆoಗಳೂರಿನ ಚೌಡಯ್ಯ ಮೆಮೋರಿಯಲ್ ಸಭಾಂಗಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ದೇಶದ ವಿವಿಧ ಭಾಗಗಳಿಂದ ಚಲುವೆಯರು ಬಂದಿದ್ದರು. ಆದರೆ, ಅವರೆಲ್ಲರನ್ನು ಸಂಜನಾ ನಾಯ್ಕ ಮೀರಿಸಿ ಹೆಜ್ಜೆ ಹಾಕಿದರು. `ಮಿಸ್ ಸೌಥ್ ಗ್ರಾಂಡ್ ಪದಕ’ ಪಡೆದ ಅವರು `ಮಿಸ್ ಇಂಡಿಯಾ’ ಹಾಗೂ ಹೊರದೇಶಗಳಲ್ಲಿ ನಡೆಯುವ ಪ್ಯಾಶನ್ ಶೋ’ಗಳಿಗೆ ಆಯ್ಕೆಯಾದರು.

ಸಂಜನಾ ನಾಯ್ಕ ಅವರು ಬೆಂಗಳೂರಿನ ಬೆಂಗಳೂರು ಇನ್ಸಟೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ದ್ವಿತಿಯ ವರ್ಷದ ತರಗತಿಯಲ್ಲಿ ಕಲಿಯುತ್ತಿದ್ದಾರೆ. ಅವರು ಭಟ್ಕಳದ ತಲಾಂದ ಗ್ರಾಮದ ಹೂವಿನಹಿತ್ಲು ಮನೆಯ ನಾರಾಯಣ ನಾಯ್ಕ ಹಾಗೂ ಸುನಿತಾ ದಂಪತಿಯ ಪುತ್ರಿ.

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    You cannot copy content of this page