6

ರಾಸಾಯನಿಕ ತುಂಬಿದ ಟ್ಯಾಂಕರ್ ಪಲ್ಟಿ

ಪೂಣೆಯಿಂದ ಕೇರಳಕ್ಕೆ ರಾಸಾಯನಿಕ ಸಾಗಿಸುತ್ತಿದ್ದ ಟ್ಯಾಂಕರ್ ಭಟ್ಕಳದ ಬಸ್ತಿಯಲ್ಲಿ ಭಾನುವಾರ ಪಲ್ಟಿಯಾಗಿದೆ. ಪರಿಣಾಮ ಹೆದ್ದಾರಿ ತುಂಬ ರಾಸಾಯನಿಕ ಚೆಲ್ಲಿದ್ದು, ಅಗ್ನಿಶಾಮಕ ಸಿಬ್ಬಂದಿ ಮುನ್ನಚ್ಚರಿಕೆಯಿಂದ ದೊಡ್ಡ ಪ್ರಮಾಣದ ಅನಾಹುತ ತಪ್ಪಿದೆ.

ಹೊನ್ನಾವರ ಕಡೆಯಿಂದ ಮಂಗಳೂರು ಮಂಗಳೂರು ಕಡೆ ಟ್ಯಾಂಕರ್ ಚಲಿಸುತ್ತಿತ್ತು. ಬಸ್ತಿ ಬಳಿ ವಾಹನ ಚಾಲಕನ ನಿಯಂತ್ರಣ ತಪ್ಪಿತು. ಪರಿಣಾಮ ಹೆದ್ದಾರಿ ಅಂಚಿನಲ್ಲಿ ಟ್ಯಾಂಕರ್ ಪಲ್ಟಿಯಾಯಿತು. ಅಪಘಾತದಲ್ಲಿ ಲಾರಿ ಚಾಲಕ ಹಾಗೂ ಕ್ಲಿನರ್’ಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಕ್ಯಾಮಿಕಲ್ ತುಂಬಿದ ಲಾರಿ ಅಪಘಾತ ನೋಡಿದ ಜನ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಕರೆ ಮಾಡಿದರು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಯಾವುದೆ ತೊಂದರೆಯಾಗದOತೆ ಫೋಮ್ ಸಿಂಪಡಿಸಿದರು. ಈ ವೇಳೆ ಪ್ರಭಾರ ಅಗ್ನಿಶಾಮಕ ಠಾಣಾಧಿಕಾರಿ ಮೋಹನ್ ಶೆಟ್ಟಿ, ಸಿಬ್ಬಂದಿ ಗಜಾನನ ದೇವಾಡಿಗ, ಸುಧಾಕರ್ ದೇವಾಡಿಗ, ಶಿವಪ್ರಸಾದ್ ನಾಯ್ಕ್, ನಾರಾಯಣ ಪಟಗಾರ ಅಪಾಯ ಆಗದಂತೆ ಕಟ್ಟೆಚ್ಚರವಹಿಸಿದ್ದರು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    You cannot copy content of this page