6

ಪ್ರಮೋದ ಹೆಗಡೆರಿಗೆ ಸುವರ್ಣ ಕಿರೀಟ!

ಉತ್ತರ ಕನ್ನಡ ಜಿಲ್ಲೆಯ ಸಾಂಸ್ಕೃತಿಕ ರಾಯಬಾರಿ ಪ್ರಮೋದ ಹೆಗಡೆ ಅವರಿಗೆ `ಸುವರ್ಣ ವಾಹಿನಿ’ ನೀಡುವ `ಸುವರ್ಣ ಕನ್ನಡಿಗ’ ಪ್ರಶಸ್ತಿ ದೊರೆತಿದೆ.

ಪ್ರಮೋದ ಹೆಗಡೆ ಅವರು ಕಳೆದ 50 ವರ್ಷಗಳಲ್ಲಿ ಸಾಂಸ್ಕೃತಿಕ, ಸಹಕಾರಿ, ರಾಜಕೀಯ, ಸಾಮಾಜಿಕ ಕ್ಷೇತ್ರಗಳಲ್ಲಿ ಮಾಡಿದ ಸಾಧನೆ ಪರಿಗಣಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಬೆಂಗಳೂರಿನ ತಾಜ್ ಹೊಟೆಲಿನಲ್ಲಿ ಕನ್ನಡ ಪ್ರಭ ಹಾಗೂ ಸುವರ್ಣ ನ್ಯೂಸ್ ಏಶಿಯಾನೆಟ್ ಕನ್ನಡ ಸಹಭಾಗಿತ್ವದಲ್ಲಿ ಫೆ 14ರಂದು ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.

ಪ್ರಮೋದ ಹೆಗಡೆ ಅವರು ಕಳೆದ 37 ವರ್ಷಗಳಿಂದ ಸಂಕಲ್ಪ ಉತ್ಸವ ಸಂಘಟಿಸುತ್ತ ಬಂದಿದ್ದಾರೆ. 25 ವರ್ಷಗಳ ಹಿಂದೆ ಯು.ಕೆ. ಸೌಹಾರ್ದ ಸಹಕಾರಿ ಬ್ಯಾಂಕ್ ಸ್ಥಾಪಿಸಿದ್ದಾರೆ. ಸದ್ಯ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಸ್.ಎಲ್.ಡಿ. ಬ್ಯಾಂಕ್ ನಿರ್ದೇಶಕರಾಗಿ, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷರಾಗಿ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ ಸಹ ಅವರು ಗಣನೀಯ ಸೇವೆ ಸಲ್ಲಿಸಿದ್ದಾರೆ. ನಾಡಿನ ಪ್ರಭಾವಿ ವಾಗ್ಮಿಯಾಗಿ ಪ್ರಮೋದ ಹೆಗಡೆ ಗುರುತಿಸಿಕೊಂಡಿದ್ದಾರೆ.

ಯಲ್ಲಾಪುರದ ತಮ್ಮ ನಿವಾಸದ ಬಳಿ ಪ್ರಮೋದ ಹೆಗಡೆ ಮೌನ ಮೌನ ಗ್ರಂಥಾಲಯವನ್ನು ಸ್ಥಾಪಿಸಿದ್ದಾರೆ. ಈ ಹಿನ್ನಲೆ ಅವರಿಗೆ ಬೆಂಗಳೂರು-ಮೈಸೂರು ಕೊಡಗಿನ ಲೋಕಸಭಾ ಸದಸ್ಯ ಯದುವೀರ ಚಾಮರಾಜ ಒಡೆಯರ್, ಕನ್ನಡ ಪ್ರಭ, ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ಸಂಪಾದಕ ರವಿ ಹೆಗಡೆ, ನಟಿ ಶೃತಿ ನಾಯ್ಡು ಹಾಗೂ ದಾವಣಗೆರೆ ವಿಶ್ವ ವಿದ್ಯಾಲಯದ ಉಪಕುಲಸಚಿವ ಬಿ.ಡಿ ಕುಂಬಾರ ಪ್ರಶಸ್ತಿ ವಿತರಿಸಿದರು.

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    You cannot copy content of this page