ಉತ್ತರಖಂಡದಲ್ಲಿ ನಡೆದ 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿದ ದಾಂಡೇಲಿಯ ಶ್ವೇತಾ ಅನ್ನಿಗೇರಿ ಕುಸ್ತಿ ಪಂದ್ಯಾವಳಿಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.
ಶ್ವೇತಾ ಅನ್ನಿಗೇರಿ ಅವರು ಅಂಬೇವಾಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಾರೆ. 58 ಕೆಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ಅವರು ಭಾಗವಹಿಸಿದ್ದರು. ಅಲ್ಲಿ ಅವರು ಮಹತ್ವದ ಸಾಧನೆ ಮಾಡಿ ಪದಕ ಪಡೆದಿದ್ದಾರೆ.
ಇನ್ನೂ ಇದೇ ಕಾಲೇಜಿನ ಶಾಲಿನಿ ಸಿದ್ದಿ ಹಾಗೂ ರೋಹನ್ ದೊಡ್ಡಮನಿ ಸಹ ಇತರೆ ವಿಭಾಗದ ಸ್ಪರ್ಧೆಗಳಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಈ ಎಲ್ಲಾ ವಿದ್ಯಾರ್ಥಿಗಳು ಕ್ರೀಡಾ ವಸತಿ ಶಾಲೆಯಲ್ಲಿ ತರಬೇತಿ ಪಡೆದವರಾಗಿದ್ದಾರೆ.