ಉತ್ತರ ಕನ್ನಡ ಜಿಲ್ಲೆಯಲ್ಲಿ 98 ಸಾವಿರಕ್ಕೂ ಅಧಿಕ ಮೊಬೈಲ್ ಸಂಖ್ಯೆಗಳಿಗೆ ಈವರೆಗೂ ಆಧಾರ್ ಜೋಡಣೆ ಆಗಿಲ್ಲ. ಮೊಬೈಲ್ ಸಂಖ್ಯೆಗೆ ಆಧಾರ್ ಸಂಖ್ಯೆ ಜೋಡಣೆ ಆಗದ ಕಾರಣ ಅನೇಕ ಯೋಜನೆಗಳು ಸಮಯಕ್ಕೆ ಸರಿಯಾಗಿ ಫಲಾನುಭವಿಗಳಿಗೆ ತಲುಪುತ್ತಿಲ್ಲ!
ಸರ್ಕಾರಿ ಯೋಜನೆ ಪಡೆಯುವ ಫಲಾನುಭವಿಗಳಿಗೆ ಆಧಾರ್ ಅಗತ್ಯವಾಗಿದ್ದು, ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಿಸುವ ಕಾರ್ಯವನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದರು. ಆಧಾರ್ ಕಾರ್ಡುಗಳಲ್ಲಿ ಕಾಣಿಸುವ ವಿವಿಧ ರೀತಿಯ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಬಗೆಹರಿಸುವಂತೆಯೂ ಅವರು ಆಧಾರ್‌ನ ಸಹಾಯಕ ಮೆನೇಜರ್‌ಗೆ ಸೂಚಿಸಿದರು.
`ಆಧಾರ್ ಕಾರ್ಡ್ನ್ನು ಅಪ್ ಡೇಟ್ ಮಾಡುವ ಕುರಿತಂತೆ ಆಧಾರ್ ಕೇಂದ್ರದಿAದ ಮೊಬೈಲ್‌ಗಳಿಗೆ ಯಾವುದೇ ರೀತಿಯ ಲಿಂಕ್ ಸಂದೇಶಗಳನ್ನು ಕಳಹಿಸುವುದಿಲ್ಲ. ಸಾರ್ವಜನಿಕರು ತಮ್ಮ ಮೊಬೈಲ್‌ಗಳಿಗೆ ಇಂತಹ ಸಂದೇಶ ಬಂದರೆ ಯಾವುದೇ ಕಾರಣಕ್ಕೂ ಲಿಂಕ್‌ನ್ನು ಒತ್ತದಂತೆ ಎಚ್ಚರದಿಂದಿರಬೇಕು’ ಎಂದು ಜನತೆಗೆ ಅವರು ಕರೆ ನೀಡಿದರು.
ಅಶಕ್ತರ ಮನೆಗೆ ಆಧಾರ್ ಸೇವೆ
ಸರ್ಕಾರದ ಹಲವು ಯೋಜನೆಗಳಿಗೆ ಆಧಾರ್ ಕಡ್ಡಾಯವಾಗಿದ್ದು, ಅಶಕ್ತರ ಮನೆಗೆ ತೆರಳಿ ಆಧಾರ್ ಸೇವೆ ಒದಗಿಸುವಂತೆ ಉತ್ತರ ಕನ್ನಡ ಜಿಲ್ಲಾಡಳಿತ ಅಧೀನ ಅಧಿಕಾರಿಗಳಗೆ ಸೂಚನೆ ನೀಡಿದೆ. ಆ ಮೂಲಕ ಸರ್ಕಾರಿ ಯೋಜನೆಯಿಂದ ಯಾರೂ ವಂಚಿತರಾಗದAತೆ ನೋಡಿಕೊಳ್ಳುವಂತೆ ತಿಳಿಸಿದೆ.
`ಅಂಚೆ ಇಲಾಖೆಯಲ್ಲಿ ಆಧಾರ್ ಕಾರ್ಡ್ ಮಾಡುವ ಸೌಲಭ್ಯವನ್ನು ಈಗಾಗಲೇ ಒದಗಿಸಲಾಗಿದೆ. ಅಂಚೆ ಇಲಾಖೆಯ ಸಿಬ್ಬಂದಿಗಳು ಅಂಚೆ ವಿತರಣೆಗೆ ಮನೆ ಮನೆಗೆ ಭೇಟಿ ನೀಡುತ್ತಿದ್ದು, ಅವರ ಮೂಲಕವೇ ಜಿಲ್ಲೆಯಲ್ಲಿ ಹಾಸಿಗೆ ಪೀಡಿತರಿಗೆ ಆಧಾರ್ ಕಾರ್ಡ್ ಮಾಡಿ ಕೊಡುವ ವ್ಯವಸ್ಥೆ ಮಾಡಬೇಕು’ ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದರು.
`ಜಿಲ್ಲೆಯಲ್ಲಿನ ಬ್ಯಾಂಕುಗಳ ಪೈಕಿ ಕೆಲವೇ ಶಾಖೆಗಳಲ್ಲಿ ಹೊಸ ಆಧಾರ್ ಕಾರ್ಡ್, ನವೀಕರಣ ಮತ್ತು ತಿದ್ದುಪಡಿ ಮಾಡುವ ಕಾರ್ಯವನ್ನು ಮಾಡಲಾಗುತ್ತಿದೆ. ಇನ್ನಷ್ಟು ಹೆಚ್ಚಿನ ಶಾಖೆಗಳಲ್ಲಿ ವಿಸ್ತರಿಸಬೇಕು’ ಎಂದು ಲೀಡ್ ಬ್ಯಾಂಕ್ ಅಧಿಕಾರಿಗಳಿಗೆ ತಿಳಿಸಿದರು. `ನೀಟ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಆಧಾರ್ ಕಾರ್ಡ್ನಲ್ಲಿನ ಸಮಸ್ಯೆಗಳಿದ್ದರೇ ನೇರವಾಗಿ ಆಧಾರ್ ಪೋರ್ಟ್ಲ್‌ನಲ್ಲಿ ಅವರೇ ಅಗತ್ಯ ದಾಖಲೆಗಳನ್ನು ನೀಡಿ, 10 ದಿನಗಳ ಒಳಗೆ ನವೀಕರಣಗೊಂಡ ಕಾರ್ಡ್ ಪಡೆಯಬಹುದಾಗಿದೆ’ ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ನಾಗೇಶ್ ರಾಯ್ಕರ್, ಲೀಡ್ ಬ್ಯಾಂಕ್ ಮೆನೇಜರ್ ಭಾರತಿ ವಸಂತ್, ಯುಐಡಿಎಐ ಬೆಂಗಳೂರು ಕೇಂದ್ರದ ಸಹಾಯಕ ಮೆನೇಜರ್ ಚೇತನ್, ಜಿಲ್ಲಾ ಆಧಾರ್ ಸಮಾಲೋಚಕ ಮಹಾಬಲೇಶ್ವರ ದೇಸಾಯಿ, ಅಂಚೆ ಇಲಾಖೆಯ ಅಧಿಕಾರಿಗಳು ಇದ್ದರು.