ಪೆಟ್ರೋಲ್ ಹಾಗೂ ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ರಾಜ್ಯದ ನಾನಾ ಕಡೆ ಪ್ರತಿಭಟನೆ ನಡೆಯುತ್ತಿದೆ. ಕಾಂಗ್ರೆಸ್ ಸರ್ಕಾರ ಇಂಧನ ಬೆಲೆ ಏರಿಸಿರುವುದು ಬಿಜೆಪಿಗೆ ಅಸ್ತçವಾಗಿದ್ದು, ಒಂದೊoದು ಕಡೆ ಒಂದೊoದು ರೀತಿಯ ಪ್ರತಿಭಟನೆ ನಡೆಸುತ್ತಿದ್ದಾರೆ.
ಅಲ್ಲಲ್ಲಿ ಹೆದ್ದಾರಿ ತಡೆದು ಪ್ರತಿಭಟಿಸಿದ್ದಾರೆ. ಮತ್ತು ಕೆಲವು ಕಡೆ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಸರ್ಕಾರದ ನಡೆಯನ್ನು ವಿರೋಧಿಸಿದ್ದಾರೆ. ಹಲವರು ಭಾಷಣಗಳನ್ನು ಮಾಡುತ್ತ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆದರೆ, ಭಟ್ಕಳದಲ್ಲಿ ಇನ್ನೂ ವಿಭಿನ್ನವಾಗಿ ಪ್ರತಿಭಟನೆ ನಡೆದಿದ್ದು, `ಡೀಸೆಲ್ ಹಾಕಿಸಲು ಹಣವಿಲ್ಲ’ ಎಂದು ಬಿಜೆಪಿ ಮಂಡಳ ಅಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ ಕಾರಿಗೆ ಹಗ್ಗ ಕಟ್ಟಿ ಅದನ್ನು ಎಳೆದು ತಂದಿದ್ದರು. ಬಿಜೆಪಿ ಹಿರಿಯ ಮುಖಂಡ ಗೋವಿಂದ ನಾಯ್ಕ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಶ್ರೀಕಾಂತ ನಾಯ್ಕ, ಪ್ರಮುಖರಾದ ಶಿವಾನಿ ಶಾಂತರಾಮ, ಮಾಜಿ ಶಾಸಕ ಸುನೀಲ ನಾಯ್ಕ, ಪ್ರಮುಖರಾದ ದಿನೇಶ ನಾಯ್ಕ, ಶೇಷಗಿರಿ ನಾಯ್ಕ, ಪಾಂಡುರoಗ ನಾಯ್ಕ ಆಸರಕೇರಿ, ವೆಂಕಟೇಶ ನಾಯ್ಕ, ಶ್ರೀನಿವಾಸ ನಾಯ್ಕ ಇನ್ನಿತರ ಕಾರ್ಯಕರ್ತರು ಕಾರು ಎಳೆಯುವ ಕಾರ್ಯಕ್ಕೆ ಕೈ ಜೋಡಿಸಿದರು.
Discussion about this post