ಗಣರಾಜ್ಯೋತ್ಸವ, ಸ್ವಾತಂತ್ರ‍್ಯ ದಿನಾಚರಣೆ ಸೇರಿದಂತೆ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ ಡಾ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಅಳವಡಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ.
ಈ ಬಗ್ಗೆ ಸಚಿವ ಸಂಪುಟ ನಿರ್ಧರಿಸಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸಕಾರದವತಿಯಿಂದ ನಡೆಯುವ ಎಲ್ಲಾ ಕಾರ್ಯಕ್ರಮಗಳಿಗೆ ಇದು ಅನ್ವಯ. ಸೀಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸಚಿವ ಸಂಪುಟದ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ ಕೆ ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
Discussion about this post