ಜಲಪಾತ, ಚಾರಣ ಪ್ರದೇಶಗಳನ್ನು ನರೆಗಾ ಯೋಜನೆ ಅಡಿ ಅಭಿವೃದ್ಧಿಪಡಿಸುವ ಬಗ್ಗೆ ಅರಣ್ಯ ಇಲಾಖೆ ಚಿಂತನೆ ನಡೆಸಿದೆ.
ಈ ಬಗ್ಗೆ ಜಿ ಪಂ ಮುಖ್ಯಾಧಿಕಾರಿ ಈಶ್ವರ್ ಕುಮಾರ ಕಾಂದೂ ಅವರೊಂದಿಗೆ ಮಾಹಿತಿ ಹಂಚಿಕೊAಡಿರುವ ಕಾರವಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, `ಪರಿಸರ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಇಲಾಖೆ ಪ್ರಯತ್ನ ನಡೆಸುತ್ತಿದೆ. ಅರಣ್ಯ ಇಲಾಖೆ ಕಾಮಗಾರಿಗಳಲ್ಲಿ ನಿರೀಕ್ಷಿತ ಪ್ರಗತಿ ಸಾಧ್ಯವಾಗದಿರುವುದಕ್ಕೆ ತರಬೇತಿಯ ಕೊರತೆ ಇದ್ದು, ನ್ಯೂನತೆಗಳನ್ನು ಸರಿಪಡಿಸಿಕೊಂಡು ಹೆಜ್ಜೆ ಹಾಕಲಾಗುವುದು. ನಮ್ಮ ವ್ಯಾಪ್ತಿಯಲ್ಲಿರುವ ಫಾಲ್ಸ್, ಟ್ರೆಕ್ಕಿಂಗ್, ಪ್ರವಾಸಿ ತಾಣಗಳನ್ನು ಗುರುತಿಸಿ, ನರೇಗಾ ಅಡಿ ಅವುಗಳನ್ನು ಅಭಿವೃದ್ಧಿಪಡಿಸುವ ಮೂಲಕ ಪರಿಸರ ಪ್ರವಾಸೋದ್ಯಮಕ್ಕೂ ನೆರವಾಗಬೇಕು’ ಎಂದು ಅಧೀನ ಸಿಬ್ಬಂದಿಗೆ ಸೂಚಿಸಿರುವುದಾಗಿ ಹೇಳಿದ್ದಾರೆ.
ಈ ವೇಳೆ `ನರೆಗಾ ಯೋಜನೆ ಸೂಕ್ತ ಅನುಷ್ಠಾನಕ್ಕಾಗಿ ವಿವಿಧ ಅನುಷ್ಠಾನ ಇಲಾಖೆಗಳ ನಡುವೆ ಉತ್ತಮ ಸಮನ್ವಯತೆ ಇರಬೇಕು’ ಎಂದು ಜಿ ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕುಮಾರ ಕಾಂದೂ ಸೂಚಿಸಿದ್ದಾರೆ.
Discussion about this post