ಹಾಲಕ್ಕಿ ಸುಗ್ಗಿ ಕುಣಿತವನ್ನೇ ಉಸಿರಾಗಿಸಿಕೊಂಡಿರುವ ಹೊನ್ನಾವರದ ಗಣಪು ಗೌಡ ಅವರಿಗೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಸಿಕ್ಕಿದೆ.
ಕರ್ನಾಟಕ ಜಾನಪದ ಅಕಾಡೆಮಿ ಈ ಪ್ರಶಸ್ತಿ ಘೋಷಿಸಿದೆ. ಜಾನಪದ ಕಲೆಗಳಿಗಾಗಿ ತಮ್ಮನ್ನು ತಾವು ಅರ್ಪಿಸಿಕೊಂಡಿರುವ ಜಾನಪದ ಕಲಾವಿದರಿಗೆ ಹಾಗೂ ಜಾನಪದ ತಜ್ಞರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. 2024ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಗಣಪು ಗೌಡ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಬಾರಿ ರಾಜ್ಯದ 30 ಜಿಲ್ಲೆಗಳಿಂದ 30 ಹಿರಿಯ ಜಾನಪದ ಕಲಾವಿದರಿಗೆ ವಾರ್ಷಿಕ ಗೌರವ ಪ್ರಶಸ್ತಿ, ಇಬ್ಬರು ಜಾನಪದ ತಜ್ಞರಿಗೆ ತಜ್ಞ ಪ್ರಶಸ್ತಿ ನೀಡಲಾಗುತ್ತಿದೆ. ಕಲಾವಿದರಿಗೆ ನೀಡುವ ಗೌರವ ಪ್ರಶಸ್ತಿಯೂ 25 ಸಾವಿರ ರೂ ಹಣವನ್ನು ಒಳಗೊಂಡಿದೆ. ಜೊತೆಗೆ ಸ್ಮರಣಿಕೆ, ಶಾಲು, ಹಾರ, ಫಲತಾಂಬೂಲ ನೀಡಿ ಗೌರವಿಸಲಾಗುತ್ತಿದೆ. ಗಣಪು ಬಡವಾ ಗೌಡ ಅವರು ಹೊನ್ನಾವರ ತಾಲೂಕಿನ ಶ್ರೀಕಾರ ಗ್ರಾಮದವರಾಗಿದ್ದಾರೆ.





