6

ಸರ್ಕಾರಿ ಶಾಲೆ: ಹೈಸ್ಕೂಲು ಮಕ್ಕಳಿಗೆ ಜಿಲ್ಲಾಧಿಕಾರಿ ಪಾಠ!

SSLC ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಮೂಡಿಸಲು ಉತ್ತರ ಕನ್ನಡ ಜಿಲ್ಲಾಡಳಿತ ಐಎಎಸ್ ಅಧಿಕಾರಿಗಳಿಂದ ಮಕ್ಕಳಿಗೆ ಪಾಠ ಮಾಡುವ ಯೋಜನೆ ರೂಪಿಸಿದೆ.

ಈ ಹಿನ್ನಲೆ ಸೋಮವಾರ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅವರು ಕಾರವಾರದ ಶಿರವಾಡದಲ್ಲಿನ ಸರ್ಕಾರಿ ಪ್ರೌಢಶಾಲೆಗೆ ತೆರಳಿ ಪಾಠ ಮಾಡಿದರು. 10ನೇ ತರಗತಿಗೆ ಪ್ರವೇಶಿಸಿದ ಅವರನ್ನು ಅಲ್ಲಿನ ಮಕ್ಕಳು ಅದ್ಧೂರಿಯಾಗಿ ಬರಮಾಡಿಕೊಂಡರು. ಮಕ್ಕಳ ಜೊತೆ ಬೆರೆತ ಲಕ್ಷ್ಮೀಪ್ರಿಯಾ ವಿವಿಧ ವಿಷಯಗಳ ಕುರಿತು ಮಾತನಾಡಿದರು.

SSLC ಪರೀಕ್ಷೆ ಮಹತ್ವ, ಪರೀಕ್ಷೆಯ ಪೂರ್ವ ತಯಾರಿ ಹಾಗೂ ಸಮಯ ಪಾಲನೆ ವಿಷಯವಾಗಿ ಅವರು ಮಕ್ಕಳಿಗೆ ತಿಳುವಳಿಕೆ ನೀಡಿದರು. ವಿದ್ಯಾರ್ಥಿಗಳ ಪ್ರಶ್ನೆಗಳಿಗೂ ಅವರು ಉತ್ತರಿಸಿದರು. `ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ‘ ಎಂದು ಅವರು ಧೈರ್ಯ ತುಂಬಿದರು. `ಮಕ್ಕಳ ಮನಸ್ಸು ಹಾಳು ಮಾಡುವ ಮೊಬೈಲ್, ಟಿವಿಯಿಂದ ವಿದ್ಯಾರ್ಥಿಗಳು ದೂರವಿರಬೇಕು. ಯಶಸ್ಸು ಸಾಧಿಸುವ ಗುರಿ ಮಾತ್ರ ನಿಮ್ಮ ಮುಂದಿರಬೇಕು’ ಎಂದು ಕಿವಿಮಾತು ಹೇಳಿದರು. `ಶಿಸ್ತುಬದ್ಧವಾಗಿ ಅಧ್ಯಯನ ಮಾಡುವ ಮೂಲಕ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ’ ಎಂದರು.

ಕೆಲ ದಿನಗಳ ಹಿಂದೆ ಉತ್ತರ ಕನ್ನಡ ಜಿ ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದು ಸಹ ಶಾಲೆಯೊಂದಕ್ಕೆ ಭೇಟಿ ನೀಡಿ ಪಾಠ ಮಾಡಿದ್ದರು. ಜಿಲ್ಲೆಯಲ್ಲಿರುವ ಇನ್ನಿತರ ಹಿರಿಯ ಅಧಿಕಾರಿಗಳು ವಿವಿಧ ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಜೊತೆ ಸಂವಾದ ನಡೆಸಲು ಸೂಚಿಸಲಾಗಿದೆ. ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸುವುದರ ಜೊತೆ ಪರೀಕ್ಷೆ ಕುರಿತು ಅವರಲ್ಲಿನ ಭಯ ಹೋಗಲಾಡಿಸಲು ಈ ಕಾರ್ಯಕ್ರಮ ರೂಪಿಸಲಾಗಿದೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page