6

ಕದಂಬ ಉತ್ಸವಕ್ಕೆ ಸಕಲ ಸಿದ್ಧತೆ: ಸಮಿತಿಗೆ ಜವಾಬ್ದಾರಿ ನೀಡಿದ ಜಿಲ್ಲಾಡಳಿತ

ಬನವಾಸಿಯಲ್ಲಿ ನಡೆಯಲಿರುವ ಕದಂಬ ಉತ್ಸವಕ್ಕೆ ಎಲ್ಲಾ ಬಗೆಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪಿಯಾ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಡಿಯೋ ಕಾನ್ಪರೆನ್ಸ ಮೂಲಕ ಅವರು ವಿವಿಧ ಇಲಾಖೆ ಅಧಿಕಾರಿಗಳನ್ನು ಮಾತನಾಡಿಸಿದ್ದು, ವಿವಿಧ ಸಮಿತಿ ರಚನೆಗೆ ಸಲಹೆ ನೀಡಿದರು.

`ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಅಗತ್ಯವಿರುವ ಉಪಸಮಿತಿ ರಚಸಬೇಕು. ತಮಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಯಾವುದೇ ಸಮಿತಿಗೆ ಹಣಕಾಸಿನ ಅಗತ್ಯವಿದ್ದಲ್ಲಿ ಈ ಬಗ್ಗೆ ಅಂದಾಜು ಪಟ್ಟಿಯನ್ನು ಸಿದ್ದಪಡಿಸಿ ಕೂಡಲೇ ಸಲ್ಲಿಸಬೇಕು’ ಎಂದು ಸೂಚಿಸಿದರು.

`ಕದಂಬ ಜ್ಯೋತಿ ಹೊರಡುವ ದಿನದಂದು ವಿವಿಧ ಕಲಾತಂಡಗಳಿoದ ಆಕರ್ಷಕ ಮೆರವಣಿಗೆಯನ್ನು ಆಯೋಜಿಸಬೇಕು. ಅಂದು ಸಂಜೆ ನಡೆಯುವ ಕಾರ್ಯಕ್ರಮದಲ್ಲಿ ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು’ ಎಂದರು. `ಕದಂಬೋತ್ಸವದ ಅಂಗವಾಗಿ ನಡೆಯುವ ಕ್ರೀಡಾ ಸ್ಪರ್ಧೆಗಳನ್ನು ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಕಲಾವಿದರಿಂದ ಅರ್ಜಿ ಸ್ವೀಕಾರ ಮಾಡುವ ಕೊನೆಯ ದಿನಾಂಕವನ್ನು ಪ್ರಕಟಿಸಿ, ಸಲ್ಲಿಕೆಯಾಗಿರುವ ಅರ್ಜಿಗಳನ್ನು ನಿಗಧಿತ ಅವಧಿಯೊಳಗೆ ಆಯ್ಕೆ ನಡೆಸಬೇಕು’ ಎಂದರು.

`ಬಿಸಿಲಿನ ತಾಪ ಅಧಿಕವಾಗಿರುವುದರಿಂದ ಸಾರ್ವಜನಿಕರಿಗೆ ಸೂಕ್ತ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಮಾಡಬೇಕು. ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಬೇಕು. ವಸತಿ ಮತ್ತು ಊಟೋಪಚಾರ ವ್ಯವಸ್ಥೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆವಹಿಸಬೇಕು. ಆಕರ್ಷಕ ವೇದಿಕೆ ನಿರ್ಮಾಣ ಮತ್ತು ವಾಹನಗಳಿಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು’ ಎಂದರು. ಶುಕ್ರವಾರದ ಒಳಗೆ ಎಲ್ಲಾ ಸಮಿತಿಗಳು ಸಭೆಯನ್ನು ನಡೆಸಿ ವರದಿ ನೀಡುವಂತೆ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಶಿರಸಿ ಉಪ ವಿಭಾಗಾಧಿಕಾರಿ ಕಾವ್ಯಾರಾಣಿ ಮತ್ತು ಎಲ್ಲಾ ಸಮಿತಿಗಳ ಸದಸ್ಯ ಕಾರ್ಯದರ್ಶಿಗಳು ಹಾಜರಿದ್ದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    You cannot copy content of this page