ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾರ್ಚ 21ರಂದು ಮೊದಲ ದಿನದ SSLC ಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಆದರೆ, ಈ ದಿನ ಒಟ್ಟು 220 ವಿದ್ಯಾರ್ಥಿಗಳು ಪರೀಕ್ಷೆಯಿಂದ ದೂರವುಳಿದಿದ್ದಾರೆ!
ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಮೂಡಿಸಲು ಸಾಕಷ್ಟು ಪ್ರಯತ್ನ ನಡೆದಿತ್ತು. ವಿಶೇಷ ತರಗತಿಗಳನ್ನು ಆಯೋಜಿಸಲಾಗಿತ್ತು. ಹಿಂದುಳಿದ ವಿದ್ಯಾರ್ಥಿಗಳ ಬಗ್ಗೆ ವಿಶೇಷ ಒತ್ತು ನೀಡಲಾಗಿತ್ತು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ವ್ಯವಸ್ಥೆಯನ್ನು ಸಹ ಸುಧಾರಿಸಲಾಗಿತ್ತು.
ಅದಾಗಿಯೂ 220 ವಿದ್ಯಾರ್ಥಿಗಳು ಗೈರಾಗಿರುವುದಕ್ಕೆ ಕಾರಣ ಗೊತ್ತಾಗಿಲ್ಲ. ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 9560 ಹಾಗೂ ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ 9209 ವಿದ್ಯಾರ್ಥಿಗಳು ಮೊದಲ ದಿನದ ಪರೀಕ್ಷೆ ಬರೆದರು. ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ 94 ವಿದ್ಯಾರ್ಥಿಗಳು ಗೈರಾಗಿದ್ದರು.
ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ 126 ವಿದ್ಯಾರ್ಥಿಗಳು ಗೈರಾಗಿದ್ದರು. ಕರಾವಳಿ ಭಾಗದಲ್ಲಿ ಕನ್ನಡ ಭಾಷಾ ಪರೀಕ್ಷೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಗೈರಾಗಿರುವುದಕ್ಕೆ ಅನೇಕರು ಅಚ್ಚರಿವ್ಯಕ್ತಪಡಿಸಿದರು.