6
  • Latest
Uttara Kannada Rs 1000 crore for water project This government is committed to providing water to the people!

ಉತ್ತರ ಕನ್ನಡ | ನೀರಿನ ಯೋಜನೆಗೆ ಸಾವಿರ ಕೋಟಿ ರೂ: ಜನರಿಗೆ ನೀರು ಕುಡಿಸಲು ಬದ್ಧ ಈ ಸರ್ಕಾರ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಉತ್ತರ ಕನ್ನಡ | ನೀರಿನ ಯೋಜನೆಗೆ ಸಾವಿರ ಕೋಟಿ ರೂ: ಜನರಿಗೆ ನೀರು ಕುಡಿಸಲು ಬದ್ಧ ಈ ಸರ್ಕಾರ!

AchyutKumar by AchyutKumar
in ರಾಜ್ಯ
Uttara Kannada Rs 1000 crore for water project This government is committed to providing water to the people!

ಉತ್ತರ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಸರ್ಕಾರ ಸಾವಿರ ಕೋಟಿ ರೂ ವೆಚ್ಚದ ಕಾಮಗಾರಿ ನಡೆಸುತ್ತಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ADVERTISEMENT

`ಜನರು ಯಾವುದೇ ಕಾರಣಕ್ಕೂ ಹಣ ನೀಡಿ ಕುಡಿಯುವ ನೀರು ಪಡೆಯಬಾರದು. ಪ್ರತಿಯೊಬ್ಬರಿಗೂ ಅಧಿಕಾರಿಗಳು ನೀರು ಪೂರೈಕೆ ಮಾಡಲಿದ್ದಾರೆ. ಸಾರ್ವಜನಿಕರಿಗೆ ನೀರು ಪೂರೈಕೆ ಮಾಡಲು ಹಣಕಾಸಿನ ಯಾವುದೇ ಕೊರತೆಯಾಗದಂತೆ ಕ್ರಮ ಜರುಗಿಸಲಾಗುತ್ತದೆ. ಖಾಸಗಿ ವ್ಯಕ್ತಿಗಳು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವೆ’ ಎಂದು ಎಚ್ಚರಿಸಿದರು.

`ಈ ಬಾರಿಯ ಬೇಸಿಗೆಯಲ್ಲಿ ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನಿರಿನ ಸಮಸ್ಯೆ ಆಗದಂತೆ ಎಚ್ಚರಿಕೆವಹಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುನ್ನಚ್ಚರಿಕಾ ಕ್ರಮ ಜರುಗಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. `ಉತ್ತರಕ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಅನೇಕ ಯೋಜನೆಗಳನ್ನು ಕೈಗೊಂಡಿದ್ದು, ಈಗಾಗಲೇ 1000 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಕಾಮಗಾರಿಗಳು ನಡೆಯುತ್ತಿದೆ. ಈಗಾಗಲೇ ಕೆಲವು ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ ಪೂರೈಸಲಾಗಿದೆ’ ಎಂದವರು ವಿವರಿಸಿದರು.

Advertisement. Scroll to continue reading.

`ಜಿಲ್ಲೆಯಲ್ಲಿ ಕಳೆದ ಬಾರಿ ಶೇ 49ರಷ್ಟು ಹೆಚ್ಚು ಮಳೆಯಾದರೂ ಕೆಲವು ಪ್ರದೇಶದಲ್ಲಿ ಈ ಬಾರಿ ಕುಡಿಯುವ ನೀರಿನ ಸಮಸ್ಯೆ ಸಂಭವಿಸುವ ಸೂಚನೆಯಿದ್ದು, ಅದಕ್ಕಾಗಿ ಸೂಕ್ತ ಮುನ್ನೆಚರಿಕೆ ಕ್ರಮಕೈಗೊಳ್ಳಬೇಕು’ ಎಂದವರು ಹೇಳಿದ್ದಾರೆ. `ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದಲ್ಲಿ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ಕುಡಿಯುವ ನೀರಿನ ಸಮಸ್ಯೆಗಳ ಕುರಿತಂತೆ ದೂರು ನೀಡಲು ನಗರ ಸ್ಥಳೀಯ ಸಂಸ್ಥೆ, ತಾಲೂಕು ಕಚೇರಿ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ’ ಎಂದವರು ಹೇಳಿದರು.

Advertisement. Scroll to continue reading.

`ಜಿಲ್ಲೆಯ ಕರಾವಳಿ ಭಾಗದ ಐದು ತಾಲೂಕುಗಳಲ್ಲಿ ಉಪ್ಪು ನೀರು ಸಿಹಿ ನೀರಿನ ಜೊತೆ ಮಿಶ್ರಣವಾಗುವುದನ್ನು ತಡೆಯುವ ಪ್ರಯತ್ನ ನಡೆದಿದೆ. ಸಣ್ಣ ಸಣ್ಣ ಹಳ್ಳ ಮತ್ತು ನದಿಗಳಿಗೆ ಕಿಂಡಿ ಆಣೆಕಟ್ಟುಗಳನ್ನು ನಿರ್ಮಿಸಿ ಮಳೆಗಾಲದಲ್ಲಿ ಗೇಟ್ ತೆಗೆಯುವ ಮತ್ತು ಬೇಸಿಗೆಗಾಲದಲ್ಲಿ ಗೇಟ್ ಮುಚ್ಚುವ ಮೂಲಕ ಸಿಹಿ ನೀರಿಗೆ ಉಪ್ಪು ನೀರು ಮಿಶ್ರಣವಾಗದ ರೀತಿಯಲ್ಲಿ ಯೋಜನೆ ರೂಪಿಸಲಾಗಿದೆ’ ಎಂದರು. `ನಗರ ಸ್ಥಳೀಯ ಸಂಸ್ಥೆಗಳು ಮತ್ತು ನಗರ ನಿರು ಸರಬರಾಜು ಮಂಡಳಿ ಮೂಲಕ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದ್ದು, ಮುಂದಿನ 2 ವರ್ಷಗಳಲ್ಲಿ ಕುಡಿಯುವ ನೀರಿನ ಸರಬರಾಜುವಿನಲ್ಲಿವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ದಿನದ 24 ಗಂಟೆಯು ಕುಡಿಯುವ ನೀರು ಪೂರೈಕೆಗೆ ಯೋಜನೆ ರೂಪಿಸಲಾಗಿದೆ’ ಎಂದರು.

ಕುಡಿಯುವ ನೀರಿನ ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕಗಳನ್ನು ತಕ್ಷಣದಲ್ಲಿ ನಿಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಮತ್ತು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಶೀಘ್ರವಾಗಿ ಅನುಮತಿಗಳನ್ನು ನಿಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

 

Previous Post

ಪೊಲೀಸ್ ಪೆರೇಡ್ ಮೈದಾನದಲ್ಲಿ ಯೋಧರ ಸಾಹಸ!

Next Post

ಉತ್ತರ ಕನ್ನಡ: ಮುಂದಿನ ಮೂರು ತಾಸಿನಲ್ಲಿ ಮತ್ತೆ ಆಲಿಕಲ್ಲು ಮಳೆ ಸಾಧ್ಯತೆ!

Next Post
Uttara Kannada: Hail rain likely again in the next three hours!

ಉತ್ತರ ಕನ್ನಡ: ಮುಂದಿನ ಮೂರು ತಾಸಿನಲ್ಲಿ ಮತ್ತೆ ಆಲಿಕಲ್ಲು ಮಳೆ ಸಾಧ್ಯತೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ