ಜೊಯಿಡಾದಲ್ಲಿ ಸುರಿದ ಭಾರೀ ಪ್ರಮಾಣದ ಮಳೆಗೆ ಶಾಲೆಯ ಮೇಲ್ಚಾವಣಿ ಹಾರಿ ಹೋಗಿದೆ. ಇದರೊಂದಿಗೆ ವಿವಿಧ ಕಡೆ ಮನೆ, ರಸ್ತೆಯ ಮೇಲೆಯೂ ಮರ ಬಿದ್ದಿದೆ.
ಉಳವಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಹಿರಿಯ ಪ್ರಾಥಮಿಕ ಶಾಲೆಯ ಮೇಲೆ ಅಡಿಕೆ ಮರ ಬಿದ್ದಿದೆ. ಈ ವೇಳೆ ಶಾಲೆಯೊಳಗಿದ್ದ ವಿದ್ಯಾರ್ಥಿ ತಲೆಗೆ ಹಂಚು ಬಡಿದು ಗಾಯವಾಗಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಯಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ವೇಳೆ ಉಳಿದ ಆರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯವಾಗಿದೆ. ಬುಧವಾರ ಮಕ್ಕಳ ಕಲಿಕೆಗೆ ಬೇರೆ ಕಡೆ ವ್ಯವಸ್ಥೆ ಮಾಡಲಾಗಿದ್ದು, ಈ ದಿನ ಪಾಠ ಎಂದಿನAತೆ ನಡೆಯಿತು. ಶಾಲೆಗೆ ವಿವಿಧ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದರು.
ಇದರೊಂದಿಗೆ ಮಾತ್ಕಾರಣಿ ಅಂಗನವಾಡಿಗೆ ಅಳವಡಿಸಿದ್ದ ಸಿಮೆಂಟ್ ಶೀಟುಗಳು ಗಾಳಿಗೆ ಹಾರಿ ಹೋಗಿದೆ. ತಾಲೂಕು ಆಡಳಿತದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ.





