`ನೆರೆ ರಾಜ್ಯ ಗೋವಾದಿಂದ ಕರ್ನಾಟಕಕ್ಕೆ ಅಕ್ರಮ ಸರಾಯಿ ಸೇರಿ ವಿವಿಧ ಮಾದಕ ವ್ಯಸನ ಬರುತ್ತಿದ್ದು, ಅದನ್ನು ಪೊಲೀಸರು ಕಟ್ಟುನಿಟ್ಟಾಗಿ ತಡೆಯಬೇಕು’ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ `ಯಾವುದೇ ಊರಿನಲ್ಲಿ ಮಾದಕ ವಸ್ತು ಸಿಕ್ಕಿಬಿದ್ದರೆ ಆ ವ್ಯಾಪ್ತಿಯ ಪೊಲೀಸ್ ಠಾಣೆ ಅಧಿಕಾರಿಗಳನ್ನು ಹೊಣೆ ಮಾಡಲಾಗುತ್ತದೆ’ ಎಂದು ಅವರು ಎಚ್ಚರಿಸಿದ್ದಾರೆ.
`ರಾಜ್ಯ ಸರ್ಕಾರವು ರಾಜ್ಯದಲ್ಲಿ ಮಾದಕ ವಸ್ತುಗಳ ನಿರ್ಮೂಲನೆ ಕುರಿತು ಯುದ್ದ ಸಾರಿದೆ. ಗಡಿಯ ಮೂಲಕ ರಾಜ್ಯದೊಳಗೆ ಮಾದಕ ವಸ್ತುಗಳ ಸರಬರಾಜು ನಡೆಯದಂತೆ ಪೊಲೀಸ್ ಇಲಾಖೆ ಹೆಚ್ಚು ಜಾಗೃತವಾಗಿ ಕೆಲಸ ಮಾಡಬೇಕು. ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ನಿರಂತರವಾಗಿ ಭೇಟಿ ಮಾಡಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಬೇಕು’ ಎಂದವರು ಸೂಚಿಸಿದ್ದಾರೆ.
ಅಕ್ರಮ ರೆಸಾರ್ಟ ಹೊಂದಿದವರಿಗೆ ನಡುಕ!
ಅಧಿಕೃತ ಮತ್ತು ಅನಧಿಕೃತ ಹೋಂ ಸ್ಟೇ ಗಳ ಬಗ್ಗೆ ನಿಖರ ಮಾಹಿತಿ ಸಂಗ್ರಹಿಸುವ0ತೆ ಗೃಹ ಸಚಿವರು ಪೊಲೀಸರಿಗೆ ಸೂಚಿಸಿದರು. ಅನಧಿಕೃತ ಹೋ ಸ್ಟೇ’ಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಹಾಗೂ ಎಲ್ಲಾ ಹೋಂ ಸ್ಟೇ’ಗಳಲ್ಲಿ ಮದ್ಯ ಸರಬರಾಜು ಮಾಡಲು ಸೂಕ್ತ ಅನುಮತಿ ಪಡೆದಿರುವ ಬಗ್ಗೆ ಪರಿಶೀಲಿಸಲು ತಿಳಿಸಿದರು. `ಜಿಲ್ಲೆಯಲ್ಲಿರುವ ವಿದೇಶಿ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಅವರಲ್ಲಿರುವ ಅಧಿಕೃತ ದಾಖಲೆಗಳನ್ನು ಪರಿಶೀಲಿಸಿ’ ಎಂದು ಸೂಚಿಸಿದರು. `ಹೋಂ ಸ್ಟೇ , ರೆಸಾರ್ಟ್ಗಳಲ್ಲಿ ನಡೆಯುವ ಪಾರ್ಟಿಗಳಲ್ಲಿ ಮಾದಕ ವಸ್ತು ಬಳಕೆಯಾಗುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಿ’ ಎಂದರು.
`ಪೊಲೀಸ್ ಇಲಾಖೆಯ ಪ್ರತಿಯೊಂದು ಠಾಣಾ ವ್ಯಾಪ್ತಿಯಲ್ಲಿ ನಡೆಯುವ ಪ್ರಕರಣಗಳಿಗೆ ಠಾಣೆಯ ಅಧಿಕಾರಿಗಳೇ ಜವಾಬ್ದಾರರು. ಆದ್ದರಿಂದ ಠಾಣಾ ವ್ಯಾಪ್ತಿಯಲ್ಲಿ ಬೀಟ್ ವ್ಯವಸ್ಥೆಯನ್ನು ಬಿಗಿಗೊಳಿಸಿ, ಗಂಭೀರ ಪ್ರಕರಣಗಳ ಸಂದರ್ಭದಲ್ಲಿ ಶಾಂತಿ ಸಭೆಗಳನ್ನು ನಡೆಸಿ ಸಾರ್ವಜನಿಕರ ಮನವೊಲಿಸಿ’ ಎಂದರು. `ಮಟ್ಕಾ, ಮೈಕ್ರೋ ಪೈನಾನ್ಸ್ ಮತ್ತು ಮೀಟರ್ ಬಡ್ಡಿ ಹಾವಳಿ ಪ್ರಕರಣಗಳು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಿ. ಜನಸ್ನೇಹಿಯಾಗಿ ಕಾನೂನು ಪ್ರಕಾರ ಕೆಲಸ ಮಾಡಿ’ ಎಂದು ಕರೆ ನೀಡಿದರು.
ಅಪಘಾತ ಅಪರಾಧ ತಗ್ಗಿಸಲು ಕ್ರಮ
ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 2.5 ವರ್ಷದಲ್ಲಿ ರಸ್ತೆ ಅಪಘಾತಗಳಿಂದ 589 ಜನ ಮರಣಹೊಂದಿದ್ದಾರೆ. 3899 ಮಂದಿ ಗಾಯಗೊಂಡಿದ್ದಾರೆ. ರಾಷ್ಟಿಯ ಹೆದ್ದಾರಿಯಲ್ಲಿ ಹೆಚ್ಚಿನ ಅಪಘಾತಗಳು ಸಂಬವಿಸುತ್ತಿದ್ದು, ಹೆದ್ದಾರಿಯಲ್ಲಿನ ಬ್ಲಾಕ್ ಸ್ಟಾಟ್‌ಗಳಲ್ಲಿ ಅಗತ್ಯ ದುರಸ್ತಿಗಳನ್ನು ಮತ್ತು ಅಗತ್ಯವಿರುವಲ್ಲಿ ಸೂಚನಾ ಫಲಕಗಳನ್ನು ಅಳವಡಿಸಬೇಕು’ ಎಂದು ಜಿ ಪರಮೇಶ್ವರ್ ಹೇಳಿದ್ದಾರೆ.
`ಸೈಬರ್ ಕ್ರೆö ಅಪರಾಧಗಳ ಬಗ್ಗೆ ಜಿಲ್ಲೆಯಲ್ಲಿ ದಾಖಲಾಗಿರುವ ಪ್ರಕರಣಗಳು ಕಡಿಮೆ ಇದ್ದು, ಸೈಬರ್ ಅಪರಾಧಗಳ ವ್ಯಾಪ್ತಿಯನ್ನು ಅಧಿಕಾರಿಗಳು ಸರಿಯಗಿ ಅರ್ಥ ಮಾಡಿಕೊಂಡು ಪ್ರಕರಣಗಳನ್ನು ದಾಖಲಿಸಬೇಕು. ಎಲ್ಲಾ ಠಾಣೆಗಳಲ್ಲಿ ಸೈಬರ್ ಪ್ರಕರಣಗಳನ್ನು ದಾಖಲಿಸಬೇಕು’ ಎಂದು ಅವರು ಸೂಚಿಸಿದರು. ಉತ್ತರ ಕನ್ನಡ ಜಿಲ್ಲೆ ಸುಳ್ಳು ಸುದ್ದಿ ಹರಡುವಲ್ಲಿ 2ನೇ ಸ್ಥಾನದಲ್ಲಿದ್ದು, ಸಮಾಜದಲ್ಲಿ ತಪ್ಪು ಸಂದೇಶ ಹರಡುವವರ ವಿರುದ್ಧ ಕ್ರಮಕ್ಕೆ ಸೂಚಿಸಿದರು.