6

ಶಿರಸಿ | ನೂತನ ಬಸ್ ನಿಲ್ದಾಣಕ್ಕೆ ಉದ್ಘಾಟನೆ ಭಾಗ್ಯ: ಕೋಟಿ ಲೆಕ್ಕಾಚಾರದ ಭರವಸೆ ನೀಡಿದ ಸಾರಿಗೆ ಸಚಿವ

ಕಳೆದ ನಾಲ್ಕುವರೆ ತಿಂಗಳಿನಿoದ ಉದ್ಘಾಟನೆಗೆ ಕಾದಿದ್ದ ಶಿರಸಿಯ ನೂತನ ಬಸ್ ನಿಲ್ದಾಣ ಶುಕ್ರವಾರದಿಂದ ಸಾರ್ವಜನಿಕ ಬಳಕೆಗೆ ಲಭ್ಯವಾಗಿದೆ. ಸಾರಿಗೆ ಸಚಿವ ರಾಮಲಿಂಗರೆಡ್ಡಿ ಈ ಬಸ್ ನಿಲ್ದಾಣವನ್ನು ಉದ್ಘಾಟಿಸಿದ್ದಾರೆ.

`ಈ ವೇಳೆ 2 ಸಾವಿರ ಹೊಸ ಬಸ್ ಖರೀದಿಗಾಗಿ ಸರ್ಕಾರ ಅನುದಾನ ನೀಡಿದೆ’ ಎಂದು ಸಚಿವ ರಾಮಲಿಂಗರೆಡ್ಡಿ ಹೇಳಿದ್ದಾರೆ. `ಬಸ್ ಖರೀದಿಗೆ 130 ಕೋಟಿ ಅನುದಾನ ಸಿಕ್ಕಿದ್ದು, ಮುಂದಿನ ಮೂರು ತಿಂಗಳ ಒಳಗೆ 300 ಬಸ್ ಖರೀದಿಸಲಾಗುತ್ತದೆ’ ಎಂಬ ವಿಷಯವನ್ನು ಜನರ ಮುಂದಿಟ್ಟಿದ್ದಾರೆ.

ಇದರೊAದಿಗೆ `ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ 6 ಜಿಲ್ಲೆಯ ಜನರ ಅನುಕೂಲಕ್ಕಾಗಿ ಒಟ್ಟು 700 ಹೆಚ್ಚುವರಿ ಬಸ್ ಸೌಕರ್ಯ ಕಲ್ಪಿಸುವ ಭರವಸೆ ನೀಡಿದ್ದಾರೆ. `ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದಾಗಿನಿಂದ 480 ಕೋಟಿ ಮಹಿಳೆಯರು ಉಚಿತವಾಗಿ ಸಂಚರಿಸಿದ್ದಾರೆ. ಕಳೆದ 4 ವರ್ಷಗಳಿಂದ ಸಾರಿಗೆ ಸಂಸ್ಥೆಗಳಲ್ಲಿ ಬಸ್ ಖರೀದಿಸದೇ ಇರುವದರಿಂದ ಸಮಸ್ಯೆಯಾಗಿದ್ದು, ಎಲ್ಲಾ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುತ್ತದೆ’ ಎಂದವರು ಹೇಳಿದ್ದಾರೆ.

ಉದ್ಯೋಗ ನೇಮಕಾತಿ:
`4 ಸಾರಿಗೆ ಸಂಸ್ಥೆಗಳಲ್ಲಿ ಒಟ್ಟು 9000 ಸಿಬ್ಬಂದಿ ನೇಮಕ ಮಾಡಲಾಗುತ್ತಿದ್ದು, ಅದರಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ 2,000 ಸಿಬ್ಬಂದಿ ಒದಗಿಸಲಾಗುತ್ತದೆ. ಅನುಕಂಪ ಆಧಾರದಲ್ಲಿ 1000 ಸಿಬ್ಬಂದಿ ನೇಮಕ ಆಗಲಿದೆ’ ಎಂದವರು ಮಾಹತಿ ನೀಡಿದರು. `ಸಾರಿಗೆ ಸಂಸ್ಥೆಯ ಸಿಬ್ಬಂದಿಗಾಗಿ ಆರೋಗ್ಯ ವಿಮೆ ಜಾರಿಗೊಳಿಸಿದ್ದು, ವಾರ್ಷಿಕ 850ರೂ ಭರಿಸಿದರೆ ಇಡೀ ಕುಟುಂಬದ ಸದಸ್ಯರಿಗೆ ಅನುಕೂಲವಾಗಲಿದೆ. ಈ ಸಂಬAಧ 300 ಆಸ್ಪತ್ರೆಗಳ ಜೊತೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಮುಂದಿನ 3 ತಿಂಗಳಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಈ ಯೋಜನೆ ಅನುಷ್ಠಾನ ಮಾಡಲಾಗುತ್ತದೆ’ ಎಂದವರು ಹೇಳಿದರು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಮಾತನಾಡಿ `ರಾಜ್ಯ ಸರ್ಕಾರ ನುಡಿದಂತೆ ನಡೆಯುತ್ತಿದೆ, ಸರ್ಕಾರ ರಚನೆ ಪೂರ್ವದಲ್ಲಿ ನೀಡಿದ ಆಶ್ವಾಸನೆಯನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲಾಗಿದೆ. ವಿದ್ಯಾರ್ಥಿಗಳು, ಮಹಿಳೆಯರಿಗೆ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದAತೆ ಅನುಕೂಲ ಮಾಡಿಕೊಡಲಾಗಿದೆ’ ಎಂದರು.

ವಾ.ಕ.ರಾ.ಸಾ.ಸAಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಭರಮಗೌಡ (ರಾಜು) ಅಲಗೌಡ ಕಾಗೆ, ಶಿರಸಿ ಶಾಸಕ ಭೀಮಣ್ಣ ನಾಯ್ಕ, ಕಾರ್ಯಕ್ರಮದಲ್ಲಿ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಸತೀಶ ನಾಯ್ಕ, ಶಿರಸಿ ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೆರೆ, ಶಿರಸಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಗದೀಶ ಎನ್ ಗೌಡ, ವಾ.ಕ.ರ.ಸಾ.ಸಂಸ್ಥೆಯ ಉಪಾಧ್ಯಕ್ಷ ಪೀರಸಾಬ್ ಕೌತಾಳ, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತ ಯೋಗೇಶ ಎ ಎಂ, ಜಂಟಿ ಸಾರಿಗೆ ಆಯುಕ್ತೆ ಓಂಕಾರೇಶ್ವರಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ, ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಶಿರಸಿ ಉಪ ವಿಭಾಗಾಧಿಕಾರಿ ಕಾವ್ಯಾರಾಣಿ ಇದ್ದರು.

  • Related Posts

    ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್ ಐಆರ್ ವಿಚಾರದಲ್ಲಿ ಚುನಾವಣಾ ಆಯೋಗ ದೂರು ನೀಡದೇ ಯಾವುದೆ ಎಫ್ ಐಆರ್ ಮಾಡಲು ಅವಕಾಶ ಇಲ್ಲ:ಬಸವರಾಜ ಬೊಮ್ಮಾಯಿ ಸಿಎಂ ಡಿ.ಕೆ. ಶಿವಕುಮಾರ್ ಗೆ 2028 ರ ಕನಸು ಭಗ್ನವಾಗುವ ಆತಂಕ:ಬಸವರಾಜ ಬೊಮ್ಮಾಯಿ…

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    You cannot copy content of this page