ಜೂನ್ 27ರಿಂದ ಜುಲೈ 5ರವರೆಗೆ 11 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 737 ವಿದ್ಯಾರ್ಥಿಗಳಿಗಾಗಿ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯಲಿದೆ.
ಈ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅವ್ಯವಹಾರಗಳು ನಡೆಯದಂತೆ ಎಚ್ಚರಿಕೆವಹಿಸಲಾಗಿದೆ. ಪರೀಕ್ಷಾ ಗೋಪ್ಯತೆ ಯಾವುದೇ ತೊಂದರೆ ಆಗದಂತೆ ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಕೆ ಮತ್ತು ವೆಬ್ ಕ್ಯಾಸ್ಟಿಂಗ್ ಮಾಡವಂತೆ ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ್ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸೂಕ್ತ ಪೊಲೀಸ್ ಭದ್ರತೆಯಲ್ಲಿ ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಹಾಗೂ ಪರೀಕ್ಷಾ ಕೇಂದ್ರಗಳಿಗೆ ಭದ್ರತೆಯನ್ನು ಒದಗಿಸುವಂತೆ ಪೊಲೀಸರಿಗೆ ಅವರು ಸೂಚಿಸಿದ್ದಾರೆ.
ಮಳೆಗಾಲವಾಗಿರುವ ಕಾರಣ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಯಲ್ಲಿ ಯಾವುದೇ ತೊಂದರೆಯಾಗದoತೆ ನೋಡಿಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳಿಗೆ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲಾಡಳಿತ ತಯಾರಿ ನಡೆಸಿದೆ. ಪರೀಕ್ಷಾ ಕೇಂದ್ರಗಳ ಸಮೀಪವಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಲು ಸೂಚಿಸಲಾಗಿದ್ದು, ಪ್ರಶ್ನೆ ಪತ್ರಿಕೆ ಸಾಗಿಸುವ ವಾಹನಗಳಿಗೆ ಸಹ ಜಿ.ಪಿಎಸ್ ಅಳವಡಿಸಲಾಗುತ್ತದೆ.




Discussion about this post